ನವದೆಹಲಿ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ದೆಹಲಿ ಹೈಕೋರ್ಟ್ ಮೋರೆ ಹೋಗಿದ್ದಾರೆ.
ಅವರ ಅರ್ಜಿಯನ್ನು ಈ ವಾರದ ಕೊನೆಯಲ್ಲಿ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ದೆಹಲಿಯ ಓಕ್ಲಾದಲ್ಲಿರುವ ಶಾಸಕರ ನಿವಾಸದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸೆಪ್ಟೆಂಬರ್ 2ರಂದು ಖಾನ್ ಅವರನ್ನು ಬಂಧಿಸಿತ್ತು. ಸೆಪ್ಟೆಂಬರ್ 23ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದಾರೆ.
ವಕ್ಫ್ ಮಂಡಳಿಯಲ್ಲಿ ನಡೆದಿರುವ ಅಕ್ರಮದ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಹಾಗೂ ಅಕ್ರಮ ಆಸ್ತಿ ಹೊಂದಿರುವುದಕ್ಕೆ ಸಂಬಂಧಿಸಿದಂತೆ ದೆಹಲಿ ಎಸಿಬಿ ದಾಖಲಿಸಿರುವ ಎಫ್‌ಐಆರ್‌ನಿಂದ ಶಾಸಕರ ವಿರುದ್ಧ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.