ADVERTISEMENT

ಶಾಸಕರ ಅನರ್ಹತೆ: ಅರ್ಜಿ ತಿರಸ್ಕರಿಸಿದ ರಾಷ್ಟ್ರಪತಿ

ಪಿಟಿಐ
Published 25 ಅಕ್ಟೋಬರ್ 2018, 18:25 IST
Last Updated 25 ಅಕ್ಟೋಬರ್ 2018, 18:25 IST

ನವದೆಹಲಿ: ಲಾಭದಾಯಕ ಹುದ್ದೆ ಹೊಂದಿರುವ ಆರೋಪದಡಿ ದೆಹಲಿಯ ಆಮ್‌ ಆದ್ಮಿ ಪಕ್ಷದ (ಆಪ್‌) 27 ಶಾಸಕರನ್ನು ಅನರ್ಹಗೊಳಿಸ
ಬೇಕು ಎಂದು ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ತಿರಸ್ಕರಿಸಿದ್ದಾರೆ.

ದೆಹಲಿಯಲ್ಲಿನ ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿ ಕಲ್ಯಾಣ ಸಮಿತಿಯ ಮುಖ್ಯಸ್ಥರನ್ನಾಗಿ ಈ ಶಾಸಕರನ್ನು ನೇಮಕ ಮಾಡಲಾಗಿತ್ತು. ಇದು ಲಾಭದಾಯಕ ಹುದ್ದೆಯಾಗಿದ್ದು, ಈ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಅರ್ಜಿ ಸಲ್ಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT