ನವದೆಹಲಿ: ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತು ಮಾಡಲಾಗಿದೆ.
'ನಿಯಮಗಳ ಉಲ್ಲಂಘನೆ, ದುರ್ನಡತೆ, ಆಕ್ಷೇಪಾರ್ಹ ನಡವಳಿಕೆ ಆರೋಪದ ಮೇಲೆ ಶುಕ್ರವಾರ ಚಡ್ಡಾ ಅವರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.
ರಾಷ್ಟ್ರ ರಾಜಧಾನಿ ಪ್ರದೇಶ ದೆಹಲಿ ಸರ್ಕಾರದ ತಿದ್ದುಪಡಿ ಮಸೂದೆ– 2023ರ ಕುರಿತಾದ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆಯಿಲ್ಲದೆ ಮೇಲ್ಮನೆಯ ಕೆಲವು ಸದಸ್ಯರ ಹೆಸರನ್ನು ಸೇರಿಸಿದ್ದಕ್ಕಾಗಿ ಎಎಪಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸಭಾನಾಯಕ ಪೀಯೂಷ್ ಗೋಯಲ್ ಅವರು ನಿರ್ಣಯ ಮಂಡಿಸಿದ್ದರು.
ಧ್ವನಿಮತದ ಮೂಲಕ ಅಮಾನತು ನಿರ್ಣಯವನ್ನು ಅಂಗೀಕರಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.