ADVERTISEMENT

ಹರಿಯಾಣ ವಿಧಾನಸಭೆಗೆ ಎಎಪಿ ಏಕಾಂಗಿ ಸ್ಪರ್ಧೆ: ಸಂಜಯ್‌ ಸಿಂಗ್‌

ಪಿಟಿಐ
Published 18 ಜುಲೈ 2024, 13:45 IST
Last Updated 18 ಜುಲೈ 2024, 13:45 IST
ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಿಂಗ್‌ ಹಾಗೂ ಎಎಪಿ ನಾಯಕರಾದ ಸಂಜಯ್‌ ಸಿಂಗ್‌, ಸಂದೀಪ್‌ ಪಾಠಕ್‌ ಅವರು ಚಂಡೀಗಢದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು
ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಿಂಗ್‌ ಹಾಗೂ ಎಎಪಿ ನಾಯಕರಾದ ಸಂಜಯ್‌ ಸಿಂಗ್‌, ಸಂದೀಪ್‌ ಪಾಠಕ್‌ ಅವರು ಚಂಡೀಗಢದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು   

ಚಂಡೀಗಢ: ಇದೇ ವರ್ಷದ ಅಂತ್ಯದಲ್ಲಿ ನಡೆಯಲಿರುವ ಹರಿಯಾಣ ವಿಧಾನಸಭೆಯ ಎಲ್ಲ 90 ಕ್ಷೇತ್ರಗಳಲ್ಲಿಯೂ ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಹಿರಿಯ ಮುಖಂಡ ಸಂಜಯ್‌ ಸಿಂಗ್‌ ಗುರುವಾರ ಹೇಳಿದ್ದಾರೆ. ಈ ಮೂಲಕ ಇಂಡಿಯಾ ಮೈತ್ರಿಕೂಟದ ಎಎಪಿ, ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸುವ ಸುಳಿವನ್ನು ನೀಡಿದ್ದಾರೆ. 

ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಸಿಂಗ್‌ ಹಾಗೂ ಪಕ್ಷದ ಹಿರಿಯ ಮುಖಂಡ ಸಂದೀಪ್‌ ಪಾಠಕ್‌ ಅವರೊಂದಿಗೆ ಚಂಡೀಗಢದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘೋಷಣೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಪಕ್ಷವು ಪ್ರಬಲವಾಗಿ ಹೋರಾಡಲಿದೆ ಎಂದೂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT