ನವದೆಹಲಿ: ಬಿಜೆಪಿಗೆ ಭಾರಿ ಗೆಲುವು ತಂದುಕೊಟ್ಟ ನರೇಂದ್ರ ಮೋದಿಅವರು ಎರಡನೇ ಅವಧಿಗೆ ದೇಶದ ಪ್ರಧಾನಿಯಾಗಿ ಗುರುವಾರ ಸಂಜೆ 7 ಗಂಟೆಗೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಬಿಮ್‌ಸ್ಟೆಕ್ ರಾಷ್ಟ್ರಗಳ ಪ್ರತಿನಿಧಿಗಳು, ಅತಿಗಣ್ಯರು ಸೇರಿದಂತೆ ಸುಮಾರು 8 ಸಾವಿರ ಅತಿಥಿಗಳು ಪ್ರಮಾಣವಚನ ಸಮಾರಂಭ
ದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿಯ ಪ್ರಮಾಣವಚನ ಸಮಾರಂಭದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಅತಿಥಿಗಳು ಪಾಲ್ಗೊಳ್ಳುತ್ತಿರುವುದು ಇದೇ ಮೊದಲು.
‘ಪ್ರಮಾಣವಚನ ಸ್ವೀಕಾರ ಸಮಾರಂಭವು ಸುಮಾರು 90 ನಿಮಿಷಗಳ ಕಾಲ ನಡೆಯಲಿದ್ದು, ಆ ಬಳಿಕ ಬಿಮ್‌ಸ್ಟೆಕ್ ರಾಷ್ಟ್ರ
ಗಳ ಪ್ರತಿನಿಧಿಗಳು ಸೇರಿದಂತೆ 40 ಜನರಿಗೆ ರಾಷ್ಟ್ರಪತಿ ಭವನದಲ್ಲಿ ಔತಣ ಕೂಟ ಏರ್ಪಡಿಸಲಾಗುವುದು’ ಎಂದು ರಾಷ್ಟ್ರಪತಿಭವನದ ವಕ್ತಾರ ಅಶೋಕ್ ಮಲಿಕ್ ತಿಳಿಸಿದ್ದಾರೆ.
ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗನಾಥ್, ಕಿರ್ಗಿಜಿಸ್ಥಾನ ಅಧ್ಯಕ್ಷ ಸೂರೊನಬಿ ಜೀನ್‌ಬೆಕೊವ್, ಬಾಂಗ್ಲಾದೇಶದ ಅಧ್ಯಕ್ಷ ಅಬ್ದುಲ್ ಹಮೀದ್, ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ನೇಪಾಳದ ಪ್ರಧಾನಿ ಕೆ.ಪಿ. ಶರ್ಮಾ ಒಲಿ, ಮ್ಯಾನ್ಮಾರ್ ಅಧ್ಯಕ್ಷ ಯು ವಿನ್ ಮಿಂಟ್ ಹಾಗೂ ಭೂತಾನ್ ಪ್ರಧಾನಿ ಲೊಟೆ ತ್ಸೇರಿಂಗ್ ಅವರು ಸಮಾರಂಭದಲ್ಲಿ ಪಾಲ್ಗೊಳುವುದನ್ನು ಖಚಿತ ಪಡಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮತ್ತು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.