ADVERTISEMENT

ಅಪಘಾತ: ಒಂದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ನೇಹಿತರು ಸಾವು

ಪಿಟಿಐ
Published 19 ಜೂನ್ 2024, 5:53 IST
Last Updated 19 ಜೂನ್ 2024, 5:53 IST
<div class="paragraphs"><p>ಅಪಘಾತ</p></div>

ಅಪಘಾತ

   

(ಸಾಂದರ್ಭಿಕ ಚಿತ್ರ)

ಧನ್‌ಬಾದ್‌: ಜಾರ್ಖಂಡ್‌ನ ಧನ್‌ಬಾದ್‌ ಜಿಲ್ಲೆಯಲ್ಲಿ ಕಾರೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ADVERTISEMENT

ಕಾರಿನಲ್ಲಿ ಐವರು ಸೇಹ್ನಿತರು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಲೋಹರ್‌ಬರ್ವಾದ ಆರು ಪಥದ ರಾಷ್ಟ್ರೀಯ ಹೆದ್ದಾರಿ-2 ರಲ್ಲಿ ಕಾರು, ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಟ್ರಕ್‌ಗೆ ಮುಖಮುಖಿಯಾಗಿ ಡಿಕ್ಕಿ ಹೊಡೆದಿದೆ.

ಗಂಭೀರವಾಗಿ ಗಾಯಗೊಂಡಿದ್ದ ಓರ್ವರನ್ನು ಸಮೀಪದ ಆಸ್ಪತ್ರಗೆ ದಾಖಲಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಳಿಕ ಟ್ರಕ್‌ ಚಾಲಕ ಪರಾರಿಯಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.