ADVERTISEMENT

ಕುನಾಲ್ ಕಮ್ರಾ ವಿರುದ್ಧ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 6 ಮೇ 2022, 5:56 IST
Last Updated 6 ಮೇ 2022, 5:56 IST
ಕುನಾಲ್ ಕಮ್ರಾ
ಕುನಾಲ್ ಕಮ್ರಾ   

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಷ್ಟ್ರಭಕ್ತಿ ಗೀತೆ ಹಾಡಿದ ಬಾಲಕನ ತಿರುಚಿದ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡ ಆರೋಪದ ಮೇಲೆ ಕಮಿಡಿಯನ್ ಕುನಾಲ್ ಕಮ್ರಾ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಒತ್ತಾಯಿಸಿದೆ.

ಟ್ವಿಟರ್‌ಜಾಲತಾಣದ ಕುಂದುಕೊರತೆ ಅಧಿಕಾರಿಗೆ ಪತ್ರ ಬರೆದಿರುವ ಆಯೋಗ, ವಿಡಿಯೊವನ್ನು ತಕ್ಷಣ ತೆಗೆದು ಹಾಕುವಂತೆ ಸೂಚಿಸಿದೆ. ಅಲ್ಲದೆ ಅವರ ಅಧಿಕೃತ ಖಾತೆಯ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದೆ.

ಈ ಸಂಬಂಧ ಸಲ್ಲಿಕೆಯಾದ ದೂರನ್ನು ಆಯೋಗ ಗಂಭೀರವಾಗಿ ಪರಿಗಣಿಸಿದೆ. ರಾಜಕೀಯ ವರ್ಚಸ್ಸು ಹೆಚ್ಚಿಸಿಕೊಳ್ಳಲು ಅಪ್ರಾಪ್ತ ವಯಸ್ಸಿನವರನ್ನು ಬಳಸಿಕೊಳ್ಳುವುದು 2015ರ ಬಾಲಾಪರಾಧಿ ನ್ಯಾಯ ಕಾಯ್ದೆ ಮತ್ತು 2021ರ ಐಟಿ ನಿಯಮಗಳ ಉಲ್ಲಂಘನೆ ಎಂದು ಆಯೋಗ ಪರಿಗಣಿಸಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.