ADVERTISEMENT

ಪ್ರಜ್ವಲ್‌ ಪ್ರಕರಣ | 10 ದಿನಗಳ ಗಡುವಿನ ಬಳಿಕ ಕ್ರಮ: ವಿದೇಶಾಂಗ ಸಚಿವಾಲಯ

ಪ್ರಜ್ವಲ್‌ ರೇವಣ್ಣ ರಾಜತಾಂತ್ರಿಕ ಪಾಸ್‌ಪೋಸ್ಟ್‌ ರದ್ದತಿ ಕುರಿತು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ

ಪಿಟಿಐ
Published 31 ಮೇ 2024, 0:27 IST
Last Updated 31 ಮೇ 2024, 0:27 IST
   

ನವದೆಹಲಿ: ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ರಾಜತಾಂತ್ರಿಕ ಪಾಸ್‌ಪೋರ್ಟ್‌ ರದ್ದತಿಗೆ ಸಂಬಂಧಿಸಿ ಜೂನ್‌ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಶೋಕಾಸ್‌ ನೋಟಿಸ್‌ ಜಾರಿ ಮಾಡಲಾಗಿದೆ. ಈ ಗಡುವು ಮುಗಿದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು’ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಹೇಳಿದೆ.

ಸಚಿವಾಲಯವು ಮೇ 23ರಂದು ಪ್ರಜ್ವಲ್‌ ರೇವಣ್ಣ ಅವರಿಗೆ ಶೋಕಾಸ್‌ ನೋಟಿಸ್‌ ನೀಡಿದೆ.

‘ನಿಮ್ಮ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳಿದ್ದು, ಕರ್ನಾಟಕ ಸರ್ಕಾರದ ಮನವಿಯಂತೆ ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ ಅನ್ನು ರದ್ದುಗೊಳಿಸಬಾರದೇಕೆ’ ಎಂದು ಸಚಿವಾಲಯ ನೋಟಿಸ್‌ನಲ್ಲಿ ಕೇಳಿದೆ.

ADVERTISEMENT

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿರುವ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್‌,‘ಈ ವಿಚಾರವಾಗಿ ಮೇ 21ರಂದು ಕರ್ನಾಟಕ ಸರ್ಕಾರ ಮನವಿ ಸಲ್ಲಿಸಿತ್ತು. ಭಾರತೀಯ ಪಾಸ್‌ಪೋರ್ಟ್‌ ಕಾಯ್ದೆ ಪ್ರಕಾರ,  ಸಂಸದ ಪ್ರಜ್ವಲ್‌ ರೇವಣ್ಣ ಅವರ ಪಾಸ್‌ಪೋರ್ಟ್‌ ರದ್ದತಿಗೆ ಸಂಬಂಧಿಸಿದ ಪ್ರಕ್ರಿಯೆಗೆ ಮೇ 23ರಂದು ಚಾಲನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.

‘10 ದಿನಗಳ ಒಳಗಾಗಿ ನೋಟಿಸ್‌ಗೆ ಪ್ರತಿಕ್ರಿಯಿಸುವಂತೆ ಸೂಚಿಸಲಾಗಿದೆ. ಪ್ರಜ್ವಲ್‌ ರೇವಣ್ಣ ಅವರ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇವೆ. ಅವರ ಪ್ರತಿಕ್ರಿಯೆ ಸ್ವೀಕರಿಸಿದ ನಂತರ ಇಲ್ಲವೇ 10 ದಿನಗಳ ಗಡುವು ಮುಗಿದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.