ADVERTISEMENT

Covid-19: 134 ದಿನಗಳ ಬಳಿಕ 10 ಸಾವಿರ ಗಡಿ ದಾಡಿದ ಸಕ್ರಿಯ ಪ್ರಕರಣ

ಪಿಟಿಐ
Published 27 ಮಾರ್ಚ್ 2023, 6:09 IST
Last Updated 27 ಮಾರ್ಚ್ 2023, 6:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ದೇಶದಾದ್ಯಂತ ಸೋಮವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,805 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಮೂಲಕ 134 ದಿನಗಳ ಬಳಿಕ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿ ದಾಟಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 10,300ಕ್ಕೆ ತಲುಪಿದೆ.

ದೇಶದಲ್ಲಿ ಇದುವರೆಗೆ 4.47 ಕೋಟಿ (4,47,05,952) ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,30,837 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ADVERTISEMENT

ಈವರೆಗೆ ಒಟ್ಟು 4,41,64,815 ಮಂದಿ ಗುಣಮುಖರಾಗಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 3.19 ಮತ್ತು ವಾರದ ದೃಢ ಪ್ರಮಾಣ ಶೇ 1.39ರಷ್ಟಿದೆ.

ಒಟ್ಟು ಸೋಂಕಿತರ ಪೈಕಿ ಶೇ 0.02 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.79 ಆಗಿದೆ.

ದೇಶದಲ್ಲಿ ಈವರೆಗೆ 220.65 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.