ADVERTISEMENT

ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಬಿಜೆಪಿಗೆ ಸೇರ್ಪಡೆ

ಏಜೆನ್ಸೀಸ್
Published 18 ಮಾರ್ಚ್ 2021, 12:46 IST
Last Updated 18 ಮಾರ್ಚ್ 2021, 12:46 IST
ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌
ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌   

ನವದೆಹಲಿ: ರಾಮಾಯಣ ಧಾರಾವಾಹಿಯ ಶ್ರೀರಾಮನ ಪಾತ್ರಧಾರಿ ಅರುಣ್‌ ಗೋವಿಲ್‌ ಅವರು ಗುರುವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ನಾಲ್ಕು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶವೊಂದರ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಅರುಣ್‌ ಗೋವಿಲ್‌ ಅವರು ಬಿಜೆಪಿ ಸೇರ್ಪಡೆಯಾಗಿರುವುದು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ದೆಹಲಿಯ ಬಿಜೆಪಿ ಕಚೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿರುವ ಅರುಣ್‌ ಗೋವಿಲ್‌ ಮೂಲತಃ ಉತ್ತರ ಪ್ರದೇಶದ ಮೀರತ್‌ ಮೂಲದವರು.

ADVERTISEMENT

1987 ರಲ್ಲಿ ಪ್ರಸಾರವಾಗುತ್ತಿದ್ದ ರಮಾನಂದ ಸಾಗರ್‌ ಅವರ ಜನಪ್ರೀಯ ಧಾರಾವಾಹಿ ‘ರಾಮಾಯಣ’ದಲ್ಲಿ ಶ್ರೀರಾಮನ ಪಾತ್ರವನ್ನು ಅರುಣ್‌ ಗೋವಿಲ್‌ ನಿರ್ವಹಿಸಿದ್ದರು.

ರಾಮ ಜನ್ಮಭೂಮಿ ವಿಚಾರವಾಗಿ 2019ರಲ್ಲಿ ಸುಪ್ರೀಂ ಕೋರ್ಟ್‌ ನೀಡಿದ್ದ ತೀರ್ಪನ್ನು ಗೋವಿಲ್‌ ಅವರು ಸ್ವಾಗತಿಸಿದ್ದರು.

ರಾಮಾಯಣ ಧಾರಾವಾಹಿಯನ್ನು ಕೊರೊನಾ ವೈರಸ್‌ ಲಾಕ್‌ಡೌನ್‌ ಹಿನ್ನೆಲೆಯಲ್ಲಿ, ಪ್ರೇಕ್ಷಕರ ಒತ್ತಾಯದ ಮೇರೆ ದೂರದರ್ಶನದಲ್ಲಿ ಮರು ಪ್ರಸಾರ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.