ನವದೆಹಲಿ: ನಟಿ ವಿಜಯಶಾಂತಿ ಅವರು ಕಾಂಗ್ರೆಸ್ ತೊರೆದು ಸೋಮವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಈ ಹಿಂದೆ ಅವರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್, ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಮತ್ತು ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರಿದ್ದಾರೆ.
ಕೇಸರಿ ಪಕ್ಷ ಮಾತ್ರವೇ ತೆಲಂಗಾಣ ಜನರ ಆಕಾಂಕ್ಷೆಗಳನ್ನು ಈಡೇರಿಸಬಲ್ಲದು ಎಂದು ಅವರು ಇದೇ ವೇಳೆ ಪ್ರತಿಪಾದಿಸಿದ್ದಾರೆ.
ವಿಜಯಶಾಂತಿ ಅವರು 90ರ ದಶಕದಲ್ಲಿ ಬಿಜೆಪಿಯಿಂದಲೇ ತಮ್ಮ ರಾಜಕೀಯ ಪಯಣ ಶುರು ಮಾಡಿದ್ದರು. ನಂತರ ಟಿಆರ್‌ಎಸ್ ಮತ್ತು ಕಾಂಗ್ರೆಸ್ ಸೇರಿದ್ದರು. 54 ವರ್ಷದ ವಿಜಯಶಾಂತಿ ಸಂಸದೆಯೂ ಆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.