ವಿಕ್ರವಾಂಡಿ (ಚೆನ್ನೈ): ತಮಿಳುನಾಡಿನ 2026ರ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ತಮಿಳಿನ ಖ್ಯಾತ ನಟ, ರಾಜಕಾರಣಿ ದಳಪತಿ ವಿಜಯ್ ಅವರು ತನ್ನ ‘ತಮಿಳಗ ವೆಟ್ರಿ ಕಳಗಂ’ (ಟಿವಿಕೆ) ಪಕ್ಷದ ಮೊದಲ ರಾಜ್ಯಮಟ್ಟದ ಸಮಾವೇಶವನ್ನು ಇಂದು (ಭಾನುವಾರ) ವಿಕ್ರವಾಂಡಿಯಲ್ಲಿ ಆಯೋಜಿಸಿದ್ದಾರೆ.
ಚೆನ್ನೈನಿಂದ 150 ಕಿ.ಮೀ ದೂರದಲ್ಲಿರುವ ವಿಕ್ರವಾಂಡಿಯಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ತಮಿಳುನಾಡು ಮತ್ತು ನೆರೆ ರಾಜ್ಯಗಳಿಂದ ಸುಮಾರು 5 ಲಕ್ಷಕ್ಕೂ ಹೆಚ್ಚು ಬೆಂಬಲಿಗರು ಮತ್ತು ಅಭಿಮಾನಿಗಳು ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಿರುಚಿರಾಪಳ್ಳಿಯಿಂದ ಚೆನ್ನೈಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯು ವಿಜಯ್ ಬೆಂಬಲಿಗರ ಕಾರುಗಳು, ಬಸ್‌ಗಳು ಮತ್ತು ದ್ವಿಚಕ್ರ ವಾಹನಗಳಿಂದ ತುಂಬಿತ್ತು. ಹೆದ್ದಾರಿಯ ಇಕ್ಕೆಲಗಳಲ್ಲಿ ಕಟೌಟ್‌ಗಳು ಮತ್ತು ಬ್ಯಾನರ್‌ಗಳನ್ನು ಹಾಕಲಾಗಿದ್ದು, ನಿರೀಕ್ಷೆಗೂ ಮೀರಿ ಬಂದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿದೆ.
ವಿಜಯ್ ಬೆಂಬಲಿಗರು ಟಿವಿಕೆ ಪಕ್ಷದ ಬಾವುಟಗಳನ್ನು ಹಿಡಿದು ಘೋಷಣೆಗಳನ್ನು ಕೂಗಿ ಸಂಭ್ರಮಿಸಿದ ದೃಶ್ಯಗಳು ಕಂಡು ಬಂದವು.
ರಾಜಕೀಯ ಗುರಿ ಸಾಧಿಸುವಲ್ಲಿ ವಿಜಯ್ ಅವರ ಮೊದಲ ಹೆಜ್ಜೆ ಎಂದು ಈ ಸಮಾವೇಶವನ್ನು ಬಣ್ಣಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.