ಬೆಂಗಳೂರು: ಸೂರ್ಯನ ಅಧ್ಯಯನಕ್ಕಾಗಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಉಡ್ಡಯಿಸಿರುವ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯ ನಾಲ್ಕನೇ ಕಕ್ಷೆ ಬದಲಾವಣೆ ಪ್ರಕ್ರಿಯೆ ಯಶಸ್ವಿಯಾಗಿ ನೆರವೇರಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಇಸ್ರೊ ಮಾಹಿತಿ ಹಂಚಿಕೊಂಡಿದೆ. ಗುರುವಾರ ತಡರಾತ್ರಿ 2 ಗಂಟೆಗೆ ಕಕ್ಷೆ ಬದಲಾವಣೆ ನೆರವೇರಿದೆ.
ಆದಿತ್ಯ ಈಗ ಭೂಮಿಯಿಂದ 256 ಕಿ.ಮೀ x 121973 ಕಿ.ಮೀ. ಎತ್ತರದ ಕಕ್ಷೆಯಲ್ಲಿ ಪರಿಭ್ರಮಣ ನಡೆಸುತ್ತಿದೆ.
ಈ ಪ್ರಕ್ರಿಯೆ ಮೇಲೆ ಇಸ್ರೊದ ಬೆಂಗಳೂರು, ಮಾರಿಷಸ್, ಪೋರ್ಟ್ ಬ್ಲೇರ್ ಮತ್ತು ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರಗಳು (ಎಸ್‌ಡಿಎಸ್‌ಸಿ-ಎಸ್‌ಎಚ್‌ಎಆರ್) ನಿಗಾ ಇಟ್ಟಿತು.
ಭೂಮಿಯ ಪರಿಭ್ರಮಣದಲ್ಲಿದ್ದ ಆದಿತ್ಯ ಎಲ್-1 ಬಾಹ್ಯಾಕಾಶ ನೌಕೆಯನ್ನು ಭೂಮಿಯಿಂದ ಲಗ್ರಾಂಜಿಯನ್ 1 ಬಿಂದುವಿಗೆ ರವಾನಿಸುವ ಮುಂದಿನ ಪ್ರಕ್ರಿಯೆ ಸೆಪ್ಟೆಂಬರ್ 19 ತಡರಾತ್ರಿ 2 ಗಂಟೆಗೆ ನಿಗದಿಯಾಗಿದೆ ಎಂದು ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.