ನವದೆಹಲಿ: ಭಾರತದಲ್ಲಿನ ಅಫ್ಗಾನಿಸ್ತಾನ ರಾಯಭಾರ ಕಚೇರಿಯು ಅಕ್ಟೋಬರ್ 1 ರಿಂದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವುದಾಗಿ ಪ್ರಕಟಿಸಿದೆ.
ಆತಿಥೇಯ ಸರ್ಕಾರದಿಂದ ಬೆಂಬಲದ ಕೊರತೆ, ಅಫ್ಗಾನಿಸ್ತಾನದ ಹಿತಾಸಕ್ತಿಗಳಿಗೆ ಸೇವೆ ಸಲ್ಲಿಸುವಲ್ಲಿ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲತೆ ಕಂಡಿರುವುದು ಮತ್ತು ಸಿಬ್ಬಂದಿ ಮತ್ತು ಸಂಪನ್ಮೂಲಗಳ ಕಡಿತವನ್ನು ಉಲ್ಲೇಖಿಸಿ ರಾಯಭಾರ ಕಚೇರಿಯನ್ನು ಬಂದ್ ಮಾಡುವುದಾಗಿ ಹೇಳಿದೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಕಚೇರಿ. ‘ನವದೆಹಲಿಯಲ್ಲಿರುವ ಅಫ್ಗಾನಿಸ್ತಾನ ರಾಯಭಾರ ಕಚೇರಿಯು ಅಕ್ಟೋಬರ್ 1, 2023 ರಿಂದ ತನ್ನ ಕಾರ್ಯಾಚರಣೆಯನ್ನು ನಿಲ್ಲಿಸುವ ನಿರ್ಧಾರವನ್ನು ಪ್ರಕಟಿಸಲು ವಿಷಾದವಾಗುತ್ತಿದೆ’ ಎಂದು ಹೇಳಿದೆ.
ರಾಯಭಾರ ಕಚೇರಿಯ ಕಾರ್ಯ ಸ್ಥಗಿತ ವಿಷಾದನೀಯವಾಗಿದ್ದರೂ, ಅಫ್ಗಾನಿಸ್ತಾನ ಮತ್ತು ಭಾರತದ ನಡುವಿನ ಐತಿಹಾಸಿಕ ಸಂಬಂಧಗಳು ಮತ್ತು ದೀರ್ಘಕಾಲದ ಪಾಲುದಾರಿಕೆಯನ್ನು ಗಣನೆಗೆ ತೆಗೆದುಕೊಂಡು ಎಚ್ಚರಿಕೆಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಎಂದು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.