ಕಣ್ಣೂರು: ಕೇರಳದ ಕಣ್ಣೂರು ಜಿಲ್ಲೆಯ ಕಣಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಪತ್ತೆಯಾಗಿದೆ. ಇದರ ಬೆನ್ನಲ್ಲೇ ಎರಡು ಫಾರ್ಮ್‌ಗಳಲ್ಲಿ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶುಕ್ರವಾರ ಮಲೆಯಂಪಾಡಿಯಲ್ಲಿರುವ ಫಾರ್ಮ್ ಒಂದರಲ್ಲಿ ಹಂದಿ ಜ್ವರ ಪತ್ತೆಯಾಗಿದ್ದನ್ನು ಪಶುಸಂಗೋಪನೆ ಅಧಿಕಾರಿಗಳು ದೃಢಪಡಿಸಿದ್ದರು. ಇದಾದ ಬಳಿಕ ಅಲ್ಲಿರುವ ಹಾಗೂ 10 ಕಿ.ಮಿ ವ್ಯಾಪ್ತಿಯಲ್ಲಿರುವ ಇನ್ನೊಂದು ಫಾರ್ಮ್‌ನಲ್ಲಿರುವ ಹಂದಿಗಳನ್ನು ಕೊಲ್ಲಲು ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಶಿಷ್ಟಾಚಾರ ಪ್ರಕಾರ ಹೂಳಲು ಸೂಚನೆ ನೀಡಿದ್ದಾರೆ.
ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿಲೋಮೀಟರ್ ಪ್ರದೇಶವನ್ನು ಸೋಂಕು ಪತ್ತೆಯಾದ ಪ್ರದೇಶವೆಂದೂ, 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಘೋಷಿಸಲಾಗಿದೆ. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಇತರ ಸ್ಥಳಗಳಿಗೆ ಸಾಗಿಸುವುದನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.