ನವದೆಹಲಿ: ಕೊಲೆ ಪ್ರಕರಣದಡಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ಖುಲಾಸೆಗೊಳಿಸಿದೆ.
ಅಪರಾಧಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್, ಅನಿರುದ್ಧ ಬೋಸ್ ಮತ್ತು ಹೃಷಿಕೇಶ್ ರಾಯ್ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠ, ‘ಕೊಲೆ ಸಂದರ್ಭದಲ್ಲಿ ಆತನಿಗೆ 12 ವರ್ಷ 6 ತಿಂಗಳು ವಯಸ್ಸಾಗಿತ್ತು ಎಂಬುದು ಶಾಲಾ ದಾಖಲಾತಿ ಪುಸ್ತಕದಿಂದ ದೃಢಪಟ್ಟಿದೆ. ಜೊತೆಗೆ ಆತ ಈಗಾಗಲೇ 28 ವರ್ಷಗಳ ಜೈಲು ಶಿಕ್ಷೆಯನ್ನು ಪೂರೈಸಿದ್ದಾನೆ. ಇದರ ಆಧಾರದಲ್ಲಿ ಆತನನ್ನು ಖುಲಾಸೆಗೊಳಿಸಲಾಗುತ್ತಿದೆ’ ಎಂದು ಹೇಳಿದೆ.
‘1994ರಲ್ಲಿ ಪುಣೆಯಲ್ಲಿ ನಡೆದಿದ್ದ ಘಟನೆಯಲ್ಲಿ ಗರ್ಭಿಣಿ ಸೇರಿದಂತೆ ಐವರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಹತ್ಯೆ ಮಾಡಲಾಗಿತ್ತು. ವಿಚಾರಣಾಧೀನ ನ್ಯಾಯಾಲಯವು ಮರಣದಂಡನೆ ಶಿಕ್ಷೆ ವಿಧಿಸಿತ್ತು. ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ಈ ತೀರ್ಪನ್ನು ಎತ್ತಿಹಿಡಿದಿದ್ದವು. ಇದನ್ನು ನಾವು ರದ್ದುಪಡಿಸುತ್ತಿದ್ದೇವೆ’ ಎಂದು ನ್ಯಾಯಪೀಠ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.