ADVERTISEMENT

ವ್ಯಾಜ್ಯ ನೀತಿಗೆ ಕೇಂದ್ರ ಕಾನೂನು ಸಚಿವಾಲಯ ಅಂಕಿತ

ಪಿಟಿಐ
Published 11 ಜೂನ್ 2024, 16:11 IST
Last Updated 11 ಜೂನ್ 2024, 16:11 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನವದೆಹಲಿ: ಹಲವು ಬಾರಿ ಚರ್ಚೆಗೆ ಒಳಗಾಗಿದ್ದ ರಾಷ್ಟ್ರೀಯ ವ್ಯಾಜ್ಯ ನೀತಿಗೆ ಕೇಂದ್ರ ಕಾನೂನು ಸಚಿವಾಲಯವು ಮಂಗಳವಾರ ಅಂತಿಮ ರೂಪ ನೀಡಿದೆ. ಬಾಕಿ ಉಳಿದಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸುವ ಉದ್ದೇಶವನ್ನು ಈ ನೀತಿ ಹೊಂದಿದೆ.

ಕೇಂದ್ರ ಕಾನೂನು ಸಚಿವರಾಗಿ ಮಂಗಳವಾರ ಅಧಿಕಾರ ಸ್ವೀಕರಿಸಿದ ಅರ್ಜುನ್ ರಾಮ್ ಮೇಘವಾಲ್ ಅವರು, ರಾಷ್ಟ್ರೀಯ ವ್ಯಾಜ್ಯ ನೀತಿ ಕಡತಕ್ಕೆ ಸಹಿ ಹಾಕಿದರು. ಇದನ್ನು ಮುಂದಿನ ದಿನಗಳಲ್ಲಿ ಕೇಂದ್ರ ಸಚಿವ ಸಂಪುಟದ ಅನುಮೋದನೆಗೆ ರವಾನಿಸಲಾಗುತ್ತದೆ.

ADVERTISEMENT

ಈ ನೀತಿಯು ನರೇಂದ್ರ ಮೋದಿ ನೇತೃತ್ವದ ಸರ್ಕಾರದ 100 ದಿನಗಳ ಕಾರ್ಯಸೂಚಿಯ ಒಂದು ಭಾಗ ಎಂದು ಮೂಲಗಳು ತಿಳಿಸಿವೆ.

ಸುಪ್ರೀಂ ಕೋರ್ಟ್, ಹೈಕೋರ್ಟ್‌ಗಳು, ಅಧೀನ ನ್ಯಾಯಾಲಯಗಳು, ನ್ಯಾಯಮಂಡಳಿಗಳು ಹಾಗೂ ಗ್ರಾಹಕರ ನ್ಯಾಯಾಲಯಗಳಲ್ಲಿ ಬಾಕಿ ಉಳಿದಿರುವ ಪ್ರಕರಣಗಳಲ್ಲಿ ನ್ಯಾಯದಾನ ತ್ವರಿತವಾಗಿ ಆಗುವಂತೆ ಮಾಡುವುದು ಸಚಿವಾಲಯದ ಆದ್ಯತೆಯ ಕೆಲಸಗಳಲ್ಲಿ ಸೇರಿದೆ ಎಂದು ಮೇಘವಾಲ್ ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.