ನವದೆಹಲಿ: ಅಗ್ನಿವೀರರು ಸೇನೆಯಿಂದ ಹೊರಬಂದ ಬಳಿಕ ಅವರಿಗೆ ವಾಹನ ಚಾಲನೆ, ಎಲೆಕ್ಟ್ರಿಷಿಯನ್, ಪ್ಲಂಬಿಂಗ್ ಹಾಗೂ ಕ್ಷೌರಿಕರ ತರಬೇತಿ ನೀಡಲಾಗುವುದು ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಅವರು ಹೇಳಿಕೆ ನೀಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಸುದ್ದಿಗೋಷ್ಠಿಯಲ್ಲಿ ಅವರು ಈ ಬಗ್ಗೆ ಮಾತನಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಪ್ರತಿಪಕ್ಷಗಳು ಈ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ‘ಸೇನಾಪಡೆಗಳು ಈಗ ತರಬೇತಿ ಕೇಂದ್ರಗಳಾಗುತ್ತಿವೆ. ಚಾಲಕರು, ಎಲೆಕ್ಟ್ರಿಷಿಯನ್ ಮೊದಲಾದ ಕೌಶಲ ತರಬೇತಿ ಪಡೆದ ಕಾರ್ಮಿಕರನ್ನು ದೇಶಕ್ಕೆ ನೀಡಲಾಗುತ್ತದೆ. ಇದು ಹೊಸ ಸಾಧನೆ’ ಎಂದು ಶಿವಸೇನಾ ನಾಯಕಿ ಹಾಗೂ ಸಂಸದೆ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.