ನವದೆಹಲಿ: ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿ (ಎನ್‌ಸಿಎಲ್‌ಟಿ) ಹಾಗೂ ಆದಾಯ ತೆರಿಗೆ ಮೇಲ್ಮನವಿ ನ್ಯಾಯಮಂಡಳಿಗೆ (ಐಟಿಎಟಿ) ಒಟ್ಟು 31 ಸದಸ್ಯರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಎನ್‌ಸಿಎಲ್‌ಟಿಗೆ 8 ನ್ಯಾಯಾಂಗ ಸದಸ್ಯರು, 10 ಜನ ತಾಂತ್ರಿಕ ಸದಸ್ಯರನ್ನು ನೇಮಕ ಮಾಡಲಾಗಿದೆ. ಐಟಿಎಟಿಗೆ ಆರು ಜನ ನ್ಯಾಯಾಂಗ ಹಾಗೂ 7 ಜನ ಅಕೌಂಟಂಟ್ ಸದಸ್ಯರನ್ನು ನೇಮಕ ಮಾಡಲಾಗಿದೆ.
ವಿವಿಧ ನ್ಯಾಯಮಂಡಳಿಗಳಿಗೆ ಸದಸ್ಯರನ್ನು ನೇಮಕ ಮಾಡದ ಕಾರಣಕ್ಕೆ ಕೇಂದ್ರ ಸರ್ಕಾರದ ನಡೆ ಬಗ್ಗೆ ಇತ್ತೀಚೆಗೆ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿತ್ತು.
ನ್ಯಾಯಮಂಡಳಿಗಳಲ್ಲಿರುವ ಖಾಲಿ ಹುದ್ದೆಗಳು ಮತ್ತು ಹೊಸ ಕಾನೂನಿಗೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಹಲವು ಅರ್ಜಿಗಳ ವಿಚಾರಣೆ ಸೋಮವಾರ (ಸೆ. 13) ನಡೆಯಲಿದ್ದು, ಅದಕ್ಕೂ ಮೊದಲೇ ಈ ನೇಮಕಾತಿಗಳು ನಡೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.