ಅಹಮದಾಬಾದ್: ಬುಧವಾರ ನಿಧನರಾದ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆ ದಕ್ಷಿಣ ಗುಜರಾತ್‌ನ ಭರೂಚ್ ಜಿಲ್ಲೆಯ ಪಿರಮಾನ್‌ಗ್ರಾಮದಲ್ಲಿ ಗುರುವಾರ ಪಕ್ಷದ ಹಿರಿಯ ಮುಖಂಡರು ಮತ್ತು ಅಪಾರ ಸಂಖ್ಯೆಯ ಬೆಂಬಲಿಗರ ಸಮ್ಮುಖದಲ್ಲಿ ನೆರವೇರಿತು.
ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಸೇರಿದಂತೆ ವಿವಿಧ ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು.
‘ಪಟೇಲ್ ಅವರ ಆಶಯಕ್ಕೆ ಅನುಗುಣವಾಗಿ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿ, ಅವರ ತಾಯಿಯ ಗೋರಿ ಪಕ್ಕದಲ್ಲೇ ಅವರನ್ನೂ ದಫನ್ ಮಾಡಲಾಯಿತು‘ ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಶಿ ಹೇಳಿದರು.
ಕೊರೊನಾ ವೈರಸ್ ಸಾಂಕ್ರಾಮಿಕ ರೋಗದ ನಡುವೆಯೂ, ದಕ್ಷಿಣ ಗುಜರಾತ್‌ನ ವಿವಿಧ ಭಾಗಗಳಿಂದ ನೂರಾರು ಸಂಖ್ಯೆಯಲ್ಲಿ ಅವರ ಬೆಂಬಲಿಗರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.