ADVERTISEMENT

ಎಂಜಿನ್ ವೈಫಲ್ಯ: ಅಬುಧಾಬಿಗೆ ಹಿಂತಿರುಗಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ

ತನಿಖೆ ಕೈಗೊಂಡ ಡಿಜಿಸಿಎ

ಪಿಟಿಐ
Published 3 ಫೆಬ್ರುವರಿ 2023, 11:47 IST
Last Updated 3 ಫೆಬ್ರುವರಿ 2023, 11:47 IST
ಏರ್ ಇಂಡಿಯಾ ವಿಮಾನ (ಎಎಫ್‌ಪಿ ಸಂಗ್ರಹ ಚಿತ್ರ)
ಏರ್ ಇಂಡಿಯಾ ವಿಮಾನ (ಎಎಫ್‌ಪಿ ಸಂಗ್ರಹ ಚಿತ್ರ)   

ನವದೆಹಲಿ: ಶುಕ್ರವಾರ ಮುಂಜಾನೆ ಕೇರಳದ ಕ್ಯಾಲಿಕಟ್‌ಗೆ ತೆರಳಬೇಕಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಟೇಕಾಫ್ ಆಗುವಾಗ ಎಂಜಿನ್‌ ವೈಫಲ್ಯದಿಂದಾಗಿ ಅಬುಧಾಬಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಘಟನೆಯ ಬಗ್ಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ)ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಾಥಮಿಕ ವರದಿಯ ಪ್ರಕಾರ, 184 ಪ್ರಯಾಣಿಕರಿದ್ದ ಬೋಯಿಂಗ್ 737-800 ವಿಮಾನದ ಎಂಜಿನ್‌ಗಳ ಪೈಕಿ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಎಲ್ಲ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು ಎಂದು ಮೂಲಗಳು ಹೇಳಿವೆ.

ವಿಮಾನವು ಟೇಕಾಫ್ ಆಗುವ ಸಂದರ್ಭದಲ್ಲಿ ತಾಂತ್ರಿಕ ದೋಷವನ್ನು ಗುರುತಿಸಲಾಗಿದೆ. ನಿಗದಿಪಡಿಸಿದ ಕಾರ್ಯವಿಧಾನಗಳನ್ನು ಅನುಸರಿಸಿ ವಿಮಾನವು ಅಬುಧಾಬಿ ವಿಮಾನ ನಿಲ್ದಾಣಕ್ಕೆ ಹಿಂತಿರುಗಿತು ಎಂದೂ ಹೇಳಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.