ADVERTISEMENT

ಮಲ್ಲಿಕಾರ್ಜುನ ಖರ್ಗೆ ಅವರಿಂದ ಬದಲಾವಣೆ ತರಲು ಸಾಧ್ಯವಿಲ್ಲ: ಶಶಿ ತರೂರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 2 ಅಕ್ಟೋಬರ್ 2022, 11:09 IST
Last Updated 2 ಅಕ್ಟೋಬರ್ 2022, 11:09 IST
ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್
ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್   

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದ ಶಶಿ ತರೂರ್ ನಡುವೆ ಪೈಪೋಟಿ ಏರ್ಪಟ್ಟಿದೆ.

ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ‘ನಾನು ಹಾಗೂ ಖರ್ಗೆ ಅವರು ಶತ್ರುಗಳಲ್ಲ. ಅಧ್ಯಕ್ಷ ಸ್ಥಾನ ಚುನಾವಣೆ ನಮ್ಮ ನಡುವಿನ ಯುದ್ಧವಲ್ಲ. ಇದು ನಮ್ಮ ಪಕ್ಷದ ಭವಿಷ್ಯದ ಸಮೀಕ್ಷೆ ಅಷ್ಟೇ’ ಎಂದು ಹೇಳಿದ್ದಾರೆ.

‘ಕಾಂಗ್ರೆಸ್ ಪಕ್ಷದ ಆಗ್ರ ನಾಯಕರಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಒಬ್ಬರು. ಅವರಂತಹ ನಾಯಕರು ಬದಲಾವಣೆ ತರಲು ಸಾಧ್ಯವಿಲ್ಲ. ಅವರಿಂದ ಈಗಿರುವ ವ್ಯವಸ್ಥೆಯನ್ನು ಮುಂದುವರಿಸಲು ಮಾತ್ರ ಸಾಧ್ಯವಾಗುತ್ತದೆ. ಆದರೆ, ನಾನು ಪಕ್ಷದ ಕಾರ್ಯಕರ್ತರ ನಿರೀಕ್ಷೆಗೆ ತಕ್ಕಂತೆ ಬದಲಾವಣೆ ತರುತ್ತೇನೆ’ ಎಂದು ತರೂರ್ ಹೇಳಿದ್ದಾರೆ.

ADVERTISEMENT

ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ. ಹೀಗಾಗಿ, ಅಂತಿಮ ಕಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಉಳಿದಿದ್ದಾರೆ.

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದ್ದ ಶುಕ್ರವಾರ ಖರ್ಗೆ, ತರೂರ್ ಮತ್ತು ತ್ರಿಪಾಠಿ ನಾಮಪತ್ರ ಸಲ್ಲಿಸಿದ್ದರು. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ಅ.19ರಂದು ಫಲಿತಾಂಶ ಹೊರಬೀಳಲಿದೆ.

ಇವನ್ನೂಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.