ADVERTISEMENT

ನಿರುದ್ಯೋಗ: ಎಐಡಿವೈಓ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2019, 20:20 IST
Last Updated 27 ಫೆಬ್ರುವರಿ 2019, 20:20 IST
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಎಐಡಿವೈಓ ಸಂಘಟನೆಯ ನೇತೃತ್ವದಲ್ಲಿ ಬುಧವಾರ ನವದೆಹಲಿಯ ಜಂತರ್‌ ಮಂತರ್‌ ಬಳಿ ನಡೆದ ಪ್ರತಿಭಟನೆಯಲ್ಲಿ ಯುವಜನರು ಭಾಗವಹಿಸಿದ್ದರು
ನಿರುದ್ಯೋಗ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಎಐಡಿವೈಓ ಸಂಘಟನೆಯ ನೇತೃತ್ವದಲ್ಲಿ ಬುಧವಾರ ನವದೆಹಲಿಯ ಜಂತರ್‌ ಮಂತರ್‌ ಬಳಿ ನಡೆದ ಪ್ರತಿಭಟನೆಯಲ್ಲಿ ಯುವಜನರು ಭಾಗವಹಿಸಿದ್ದರು   

ನವದೆಹಲಿ: ದೇಶದಲ್ಲಿನ ನಿರುದ್ಯೋಗ ಸಮಸ್ಯೆ ನಿವಾರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಸಂಘಟನೆ (ಎಐಡಿವೈಓ)ಯ ನೇತೃತ್ವದಲ್ಲಿ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು.

ಇಲ್ಲಿನ ಜಂತರ್‌ ಮಂತರ್‌ನಿಂದ ಸಂಸತ್‌ ಭವನದ‌ವರೆಗೆ ನಡೆದ ಪ್ರತಿಭಟನಾ ರ‍್ಯಾಲಿಯಲ್ಲಿ ವಿವಿಧ ರಾಜ್ಯಗಳ ಸಾವಿರಾರು ಜನ ಭಾಗವಹಿಸಿದ್ದರು.

ನಿರುದ್ಯೋಗದಂತಹ ಗಂಭೀರ ಸಮಸ್ಯೆಯ ನಿವಾರಣೆಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಬದಲಿಗೆ, ಯುದ್ಧೋನ್ಮಾದದ ಕುರಿತು ಪ್ರಚೋದನೆ ನೀಡುತ್ತಿದೆ ಎಂದು ದೆಹಲಿ ವಿಶ್ವವಿದ್ಯಾಲಯದ ಪ್ರೊ. ಅಪೂರ್ವಾನಂದ್ ದೂರಿದರು.

ADVERTISEMENT

ನೋಟು ರದ್ದತಿಯಂತಹ ನೀತಿಯಿಂದಾಗಿ ಉದ್ಯೋಗ ಸೃಷ್ಟಿಗೆ ಅವಕಾಶ ಇಲ್ಲದಂತಾಗಿದೆ. ಯುವಕರಿಗೆ ಉದ್ಯೋಗ ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ. ಗೋ ಹತ್ಯೆ, ಜಾತಿವಾದ ಮತ್ತು ಕೋಮುವಾದದ ಕಾರ್ಯಸೂಚಿಯ ಮೂಲಕ ಯುವಜನರ ದಾರಿ ತಪ್ಪಿಸಲಾಗುತ್ತಿದೆ ಎಂದು ಸಾಮಾಜಿಕ ಕಾರ್ಯಕರ್ತ, ನಟ ಪ್ರಕಾಶ್‌ ರೈ ಆರೋಪಿಸಿದರು.

ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪ್ರತಿಭಾ ನಾಯಕ್, ಅಧ್ಯಕ್ಷ ರಾಮಾಂಜನಪ್ಪ ಆಲ್ದಳ್ಳಿ, ಉಪಾಧ್ಯಕ್ಷ ಜುಬೇರ್ ರಬ್ಬಾನಿ, ಎಸ್‌ಯುಸಿಐ (ಸಿ) ಕೇಂದ್ರ ಸಮಿತಿ ಸದಸ್ಯ ಅರುಣ್ ಸಿಂಗ್, ಜಿ.ಎಸ್.ಕುಮಾರ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.