ನವದೆಹಲಿ: ಲೋಕಸಭೆ, ರಾಜ್ಯಸಭೆ ಸದಸ್ಯರಿಗೆ ಚಿಕಿತ್ಸಾ ಸೌಲಭ್ಯವನ್ನು ಸುವ್ಯವಸ್ಥಿತಗೊಳಿಸುವುದಕ್ಕಾಗಿ ದೆಹಲಿಯ ಏಮ್ಸ್ ಆಸ್ಪತ್ರೆಯು ಪ್ರಮಾಣೀಕೃತ ಕಾರ್ಯಾಚರಣೆ ವಿಧಾನ (ಎಸ್‌ಒಪಿ) ಸಿದ್ಧಪಡಿಸಿದೆ. ಇದಕ್ಕೆ ಕೆಲ ವೈದ್ಯರಿಂದ ವಿರೋಧ ವ್ಯಕ್ತವಾಗಿದೆ.
ಸಂಸದರ ಜತೆ ಸಮನ್ವಯ ಸಾಧಿಸಲು ನೋಡೆಲ್ ಅಧಿಕಾರಿಯನ್ನು ನೇಮಿಸಲಾಗುವುದು. ಆಸ್ಪತ್ರೆಯ ಆಡಳಿತ ವಿಭಾಗದ ವೈದ್ಯರು ಆಸ್ಪತ್ರೆಯ ನಿಯಂತ್ರಣ ಕೊಠಡಿಯಲ್ಲಿ ಪಾಳಿಯ ಆಧಾರದಲ್ಲಿ ಕೆಲಸ ಮಾಡಲಿದ್ದಾರೆ. ಸಂಸದರ ಕಚೇರಿ ಸಿಬ್ಬಂದಿಯು ಕರೆ ಮಾಡಿ ವಿಷಯ ತಿಳಿಸಿದರೆ ಅವರು ತಜ್ಞ ವೈದ್ಯರ ಜೊತೆ ಮಾತನಾಡಿ ಭೇಟಿಯ ವ್ಯವಸ್ಥೆ ಮಾಡಲಿದ್ದಾರೆ ಎಂದು ಏಮ್ಸ್ ನಿರ್ದೇಶಕರು ತಿಳಿಸಿದ್ದಾರೆ.
‘10 ಕೋಟಿ ಡೋಸ್ ಅವಧಿ ಮೀರಿದೆ’
‘ಹೋದ ವರ್ಷದ ಡಿಸೆಂಬರ್‌ನಲ್ಲೇ ಕೋವಿಶೀಲ್ಡ್ ಲಸಿಕೆಯ ಉತ್ಪಾದನೆ ಸ್ಥಗಿತಗೊಳಿಸಿದ್ದೆವು. ಆಗ ದಾಸ್ತಾನು ಇದ್ದ ಡೋಸ್‌ಗಳ ಪೈಕಿ 10 ಕೋಟಿ ಡೋಸ್‌ಗಳ ಅವಧಿ ಮೀರಿದೆ’ ಎಂದು ಸೀರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸಿಇಒ ಆದಾರ್ ಪೂನಾವಾಲಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.