ADVERTISEMENT

ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್‌ ಓವೈಸಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಮಾರ್ಚ್ 2024, 7:43 IST
Last Updated 16 ಮಾರ್ಚ್ 2024, 7:43 IST
<div class="paragraphs"><p>ಅಸಾದುದ್ದೀನ್‌ ಓವೈಸಿ</p></div>

ಅಸಾದುದ್ದೀನ್‌ ಓವೈಸಿ

   

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ‌ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿಯವರು 2019ರ ಡಿಸೆಂಬರ್‌ನಲ್ಲಿ ಅಂಕಿತ ಹಾಕಿದ್ದರು. ಆದರೆ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ನಾಲ್ಕು ವರ್ಷಗಳ ಬಳಿಕ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿದೆ ಎಂದು ಆರೋಪಿಸಲಾಗಿದೆ.

ADVERTISEMENT

ಈ ಕಾಯ್ದೆಯು ಯಾವುದೇ ದಾಖಲೆಗಳು ಇಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಗಾನಿಸ್ತಾನದಿಂದ 2014ರ ಡಿಸೆಂಬರ್ 31ಕ್ಕೆ ಮೊದಲು ಭಾರತ ಪ್ರವೇಶಿಸಿದ ಮುಸ್ಲಿಮೇತರರಿಗೆ ಭಾರತದ ಪೌರತ್ವವನ್ನು ನೀಡುತ್ತದೆ. ಈ ಮೂರು ದೇಶಗಳಲ್ಲಿ ದೌರ್ಜನ್ಯಕ್ಕೆ ಗುರಿಯಾಗಿ ಭಾರತಕ್ಕೆ ಬಂದ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತ ಸಮುದಾಯದವರಿಗೆ ಭಾರತದ ಪೌರತ್ವವನ್ನು ನೀಡಲಿದೆ.

‘ಪೌರತ್ವ (ತಿದ್ದುಪಡಿ) ನಿಯಮಗಳು–2024 ಹೆಸರಿನ ಈ ನಿಯಮಗಳು, ಸಿಎಎ–2019 ಕಾಯ್ದೆಯ ಪ್ರಕಾರ ಅರ್ಹರಾದವರಿಗೆ ಭಾರತೀಯ ಪೌರತ್ವ ನೀಡಲು ಅವಕಾಶ ಕಲ್ಪಿಸಲಿವೆ’ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರೊಬ್ಬರು ತಿಳಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.