ನವದೆಹಲಿ: ಏರ್ ಇಂಡಿಯಾದ ಮುಖ್ಯಸ್ಥ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನಾಗರಿಕ ವಿಮಾನಯಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ಜನವರಿ 31ರಂದು ರಾಜೀವ್ ನಯನ್ ಚೌಬೆ ಅವರ ನಿವೃತ್ತಿಯಿಂದತೆರವಾಗಿದ್ದ ಸ್ಥಾನಕ್ಕೆ ಈ ನೇಮಕ ನಡೆದಿದೆ.
ಕರ್ನಾಟಕ ಕೇಡರ್‌ನ 1985ರ ಐಎಎಸ್ ಅಧಿಕಾರಿಯಾಗಿರುವ ಖರೋಲಾ ಅವರನ್ನು 2017ರ ನವೆಂಬರ್‌ನಲ್ಲಿ ಏರ್ ಇಂಡಿಯಾ ಲಿಮಿಟೆಡ್‌ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಿಸಲಾಗಿತ್ತು. ಚೌಬೆ ಅವರನ್ನು ಯುಪಿಎಸ್‌ಸಿ ಸದಸ್ಯರನ್ನಾಗಿ ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.