ADVERTISEMENT

ಬಾಂಬ್‌ ಬೆದರಿಕೆ: ಮುಂಬೈ–ನ್ಯೂಯಾರ್ಕ್‌ Air India ವಿಮಾನ ದೆಹಲಿಯಲ್ಲಿ ಲ್ಯಾಂಡ್‌

ಪಿಟಿಐ
Published 14 ಅಕ್ಟೋಬರ್ 2024, 6:17 IST
Last Updated 14 ಅಕ್ಟೋಬರ್ 2024, 6:17 IST
<div class="paragraphs"><p>ಏರ್‌ ಇಂಡಿಯಾ ವಿಮಾನ</p></div>

ಏರ್‌ ಇಂಡಿಯಾ ವಿಮಾನ

   

(ರಾಯಿಟರ್ಸ್‌ ಚಿತ್ರ)

ನವದೆಹಲಿ: ಮುಂಬೈನಿಂದ 239 ಪ್ರಯಾಣಿಕರನ್ನು ಹೊತ್ತು ನ್ಯೂಯಾರ್ಕ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಸೋಮವಾರ ಬಾಂಬ್ ಬೆದರಿಕೆ ಬಂದಿದೆ. ಭದ್ರತಾ ದೃಷ್ಟಿಯಿಂದ ಮಾರ್ಗ ಬದಲಾವಣೆ ಮಾಡಲಾಗಿದ್ದು, ದೆಹಲಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

'ಸದ್ಯ ವಿಮಾನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್‌ ಆಗಿದೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಗಾಗಿ ಹೆಚ್ಚಿನ ಶಿಷ್ಟಾಚಾರ‌ಗಳನ್ನು ಪಾಲಿಸಲಾಗುತ್ತಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟ್ವೀಟ್ ಮೂಲಕ ಬೆದರಿಕೆ ಬಂದಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

'ಅಕ್ಟೋಬರ್ 14 ರಂದು ಮುಂಬೈನಿಂದ ನ್ಯೂಯಾರ್ಕ್‌ (ಜೆಎಫ್‌ಕೆ)ಗೆ ತೆರಳುತ್ತಿದ್ದ AI119 ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದೆ. ಸರ್ಕಾರದ ಭದ್ರತಾ ನಿಯಂತ್ರಣ ಸಮಿತಿಯ ಸೂಚನೆಗಳ ಮೇರೆಗೆ ವಿಮಾನದ ಮಾರ್ಗ ಬದಲಾವಣೆ ಮಾಡಿ ದೆಹಲಿಯಲ್ಲಿ ಲ್ಯಾಂಡ್‌ ಮಾಡಲಾಗಿದೆ' ಎಂದು ಏರ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ಪ್ರಯಾಣಿಕರು ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿದ್ದಾರೆ. ಅವರ ಸುರಕ್ಷತೆಗೆ ಬದ್ಧವಾಗಿರುವುದಾಗಿ ಏರ್ ಇಂಡಿಯಾ ಹೇಳಿದೆ.

ಇಂಡಿಗೊ ವಿಮಾನಗಳಿಗೂ ಬಾಂಬ್ ಬೆದರಿಕೆ

ಮುಂಬೈನಿಂದ ಮಸ್ಕತ್‌ಗೆ ಹಾಗೂ ಮುಂಬೈನಿಂದ ಜೆಡ್ಡಾಕ್ಕೆ ಕಾರ್ಯಾಚರಿಸುವ ಎರಡು ಇಂಡಿಗೊ ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿದೆ. ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇಂಡಿಗೊ 6E 1275 ಮತ್ತು ಇಂಡಿಗೊ 6E 56 ಎಂಬ ಎರಡು ವಿಮಾನಗಳನ್ನು ಪ್ರತ್ಯೇಕ ರನ್‌ವೇಗೆ ಸ್ಥಳಾಂತರಿಸಲಾಗಿದ್ದು, ಹೆಚ್ಚಿನ ತಪಾಸಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.