ADVERTISEMENT

ಜನರ ರಕ್ಷಣೆಗೆ ದೇವರೇ ಬಂದಿದ್ದಾರೆ: ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2023, 16:26 IST
Last Updated 10 ನವೆಂಬರ್ 2023, 16:26 IST
<div class="paragraphs"><p>ರಾಷ್ಟ್ರೀಯ ಹಸಿರು ನ್ಯಾಯಮಂಡಳಿ</p></div>

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

   

ನವದೆಹಲಿ: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಅಧಿಕಾರಿಗಳು ಯಾವ ಕ್ರಮವನ್ನೂ ಕೈಗೊಳ್ಳದಿದ್ದಾಗ ಜನರ ರಕ್ಷಣೆಗೆ ದೇವರೇ ಬಂದಿದ್ದಾರೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಶುಕ್ರವಾರ ಹೇಳಿದೆ.

‘ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವಾಯು ಮಾಲಿನ್ಯ ಕುರಿತ ಅರ್ಜಿ ವಿಚಾರಣೆ ನಡೆಸಿದ ಹಸಿರು ನ್ಯಾಯಪೀಠ, ‘ರಾಷ್ಟ್ರ ರಾಜಧಾನಿಯಲ್ಲಿ ಇಂದು ಮಳೆಯಾಗಿದೆ. ದೇವರೇ ನಿಮ್ಮ ರಕ್ಷಣೆಗೆ ಬಂದಿದ್ದಾರೆ. ಎಲ್ಲವನ್ನೂ ದೇವರೇ ನೋಡಿಕೊಳ್ಳುತ್ತಾರೆಂದು ಸುಮ್ಮನೆ ಕುಳಿತುಕೊಳ್ಳಬೇಡಿ, ನೀವೂ ಶ್ರಮ ಹಾಕಬೇಕು’ ಎಂದು ತಿಳಿಸಿತು.

ADVERTISEMENT

ಇದೇ ವೇಳೆ, ಕೃಷಿ ತ್ಯಾಜ್ಯ ಸುಡುವುದನ್ನು ತಡೆಗಟ್ಟಬೇಕು ಎಂದು ಪಂಜಾಬ್‌ ಅಧಿಕಾರಿಗಳಿಗೆ ಸೂಚಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.