ನವದೆಹಲಿ: ಏರ್‌ಸೆಲ್–ಮ್ಯಾಕ್ಸಿಸ್ ಹಗರಣ ಸಂಬಂಧ ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿಯಲ್ಲಿ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹಾಗೂ ಅವರ ಪುತ್ರ ಕಾರ್ತಿ ಚಿದಂಬರಂ ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.
ಸಿಬಿಐ ನ್ಯಾಯಾಧೀಶ ಓ.ಪಿ ಸೈನಿ ಅವರಿಗೆ ಹೆಚ್ಚುವರಿ ಆರೋಪಪಟ್ಟಿಯನ್ನು ಗುರುವಾರ ಸಲ್ಲಿಸಲಾಯಿತು.
2006ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದ ವೇಳೆ ಚಿದಂಬರಂ ಅವರು ವಿದೇಶಿ ಕಂಪನಿಗೆ ‘ವಿದೇಶಿ ಹೂಡಿಕೆ ಪ್ರಚಾರ ಮಂಡಳಿ’ಯ (ಎಫ್‌ಐಪಿಬಿ) ಮಂಜೂರಾತಿ ನೀಡಿದ್ದು ಹೇಗೆ ಎಂಬ ಕುರಿತು ಸಿಬಿಐ ತನಿಖೆ ನಡೆಸುತ್ತಿದೆ. ಈ ಅಧಿಕಾರ ಇರುವುದು ಸಂಸತ್ತಿನ ಆರ್ಥಿಕ ವ್ಯವಹಾರ ಸಮಿತಿಗೆ ಮಾತ್ರ.
ಮ್ಯಾಕ್ಸಿಸ್‌ನ ಅಂಗಸಂಸ್ಥೆ ಮಾರಿಷಸ್ ಮೂಲದ ಗ್ಲೋಬಲ್ ಕಮ್ಯುನಿಕೇಷನ್ ಸರ್ವೀಸಸ್ ಹೋಲ್ಡಿಂಗ್ಸ್‌ಗೆ ಮಂಜೂರಾತಿ ನೀಡಲಾಗಿತ್ತು. ಈ ಪ್ರಕರಣದಲ್ಲಿ ಮಾರನ್ ಸಹೋದರರ ವಿರುದ್ಧ ಈ ಮೊದಲೇ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.