ವಾಷಿಂಗ್ಟನ್: ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿರುವ ವಿಶ್ವ ಬ್ಯಾಂಕ್ ಅಧ್ಯಕ್ಷ ಅಜಯ್ ಬಂಗಾ ಅವರು ಅಹಮದಾಬಾದ್ನಲ್ಲಿ ನಡೆಯಲಿರುವ ಜಿ–20 ಹಣಕಾಸು ಸಚಿವರು ಹಾಗೂ ಕೇಂದ್ರೀಯ ಬ್ಯಾಂಕ್ ಗವರ್ನರ್ಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಭಾರತೀಯ ಮೂಲದ ಅಮೆರಿಕ ಪ್ರಜೆ ಬಂಗಾ ಅವರು ಜೂನ್ನಲ್ಲಿ ವಿಶ್ವ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಅಧ್ಯಕ್ಷರಾದ ಬಳಿಕ ಭಾರತಕ್ಕೆ ಮೊದಲ ಬಾರಿ ಭೇಟಿ ನೀಡುತ್ತಿದ್ದಾರೆ.
ಭಾರತದ ಅಧ್ಯಕ್ಷತೆಯಲ್ಲಿ ಜಿ 20 ಶೃಂಗಸಭೆ ನಡೆಯಲಿದ್ದು, ಪ್ರಧಾನಮಂತ್ರಿ ನೇತೃತ್ವ ವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.