ADVERTISEMENT

ಎಂಥಾ ಮಾತು

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 19:55 IST
Last Updated 3 ಏಪ್ರಿಲ್ 2024, 19:55 IST
ಅಮಿತ್‌ ಶಾ
ಅಮಿತ್‌ ಶಾ   

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ ಅವರು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದರ ಪರ ಇರಲಿಲ್ಲ. ಕಾಂಗ್ರೆಸ್ ಕೂಡ ಆಡಳಿತದಲ್ಲಿದ್ದಾಗ ಈ ಕುರಿತು ಏನೂ ಮಾಡಿರಲಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಜನರ ಭಾವನೆಗಳಿಗೆ ಗೌರವ ಕೊಟ್ಟು ರಾಮಮಂದಿರ ನಿರ್ಮಿಸಿದೆ. ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿರುವುದಕ್ಕೆ ಕೇಂದ್ರ ಸರ್ಕಾರವನ್ನು ಜನರು ಪ್ರಶಂಸಿಸಿದ್ದಾರೆ

-ಅಮಿತ್‌ ಶಾ, ಕೇಂದ್ರ ಗೃಹ ಸಚಿವ

ಬಿಜೆಪಿಯು ಶ್ರೀರಾಮನನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಶ್ರೀರಾಮ ಎಲ್ಲರಿಗೂ ದೇವರಾಗಿದ್ದು, ದೇವರ ಹೆಸರಿನಲ್ಲಿ ಮತ ಕೇಳುತ್ತಿರುವುದು ‘ಅಸಹ್ಯಕರ ಕಾರ್ಯ’. ಪೌರತ್ವ ನೋಂದಣಿ ಕಾಯ್ದೆಯ (ಸಿಎಎ) ಕಾರಣದಿಂದ ಜನರು ಪ್ರಕ್ಷುಬ್ಧರಾಗಿದ್ದಾರೆ ಮತ್ತು ಪ್ರತಿಭಟನೆ ನಡೆಸಲು ಬಯಸಿದ್ದಾರೆ. ಆದರೆ ಅಸ್ಸಾಂನ ಬಿಜೆಪಿ ಸರ್ಕಾರವು ಜನರ ಪ್ರತಿಭಟಿಸುವ ಹಕ್ಕನ್ನೇ ಕಸಿದುಕೊಂಡಿದೆ. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರೆ ಅವರನ್ನು ಜೈಲಿಗೆ ಹಾಕಲಾಗುತ್ತಿದೆ

ADVERTISEMENT

- ಗೌರವ್‌ ಗೊಗೋಯಿ, ಕಾಂಗ್ರೆಸ್‌ ಮುಖಂಡ

ಗೌರವ್‌ ಗೊಗೋಯಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.