ADVERTISEMENT

ಉನ್ನಾವ್‌ ಪ್ರಕರಣ| ಯೋಗಿ ಆದಿತ್ಯನಾಥ್‌ ರಾಜೀನಾಮೆಗೆ ಅಖಿಲೇಶ್‌ ಯಾದವ್ ಒತ್ತಾಯ

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2019, 12:22 IST
Last Updated 7 ಡಿಸೆಂಬರ್ 2019, 12:22 IST
ಉತ್ತರ ಪ್ರದೇಶ ವಿಧಾನಸಭೆಯ ಬಳಿ ಧರಣಿ ಕುಳಿತಿರುವ ಮಾಜಿ ಸಿಎಂ ಅಖಿಲೇಶ್‌ ಯಾದವ್‌
ಉತ್ತರ ಪ್ರದೇಶ ವಿಧಾನಸಭೆಯ ಬಳಿ ಧರಣಿ ಕುಳಿತಿರುವ ಮಾಜಿ ಸಿಎಂ ಅಖಿಲೇಶ್‌ ಯಾದವ್‌   

ಲಕ್ನೋ: ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಮಾಜಿ ಮುಖ್ಯಮಂತ್ರಿಅಖಿಲೇಶ್‌ ಯಾದವ್‌ ಅವರು ವಿಧಾನಸಭೆ ಬಳಿ‌ಧರಣಿ ಕುಳಿತಿದ್ದಾರೆ. ಉನ್ನಾವ್‌ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಯೋಗಿ ಆದಿತ್ಯನಾಥ್‌ ರಾಜೀನಾಮೆಗೆ ಅಖಿಲೇಶ್‌ ಒತ್ತಾಯಿಸಿದ್ದಾರೆ.

‘ಇಲ್ಲಿಯವರೆಗೂ ಉತ್ತರ ಪ್ರದೇಶ ಮುಖ್ಯಮಂತ್ರಿ, ರಾಜ್ಯ ಗೃಹ ಕಾರ್ಯದರ್ಶಿ ಮತ್ತು ಡಿಜಿಪಿ ರಾಜೀನಾಮೆ ನೀಡಿಲ್ಲ. ಹೀಗಾದರೆ, ನ್ಯಾಯ ಸಿಕ್ಕಂತಾಗುವುದಿಲ್ಲ. ಉತ್ತರ ಪ್ರದೇಶದ ಪ್ರತಿ ಜಿಲ್ಲೆಯಲ್ಲಿ ಉನ್ನಾವ್‌ ಅತ್ಯಾಚಾರ, ಕೊಲೆ ಪ್ರಕರಣ ಖಂಡಿಸಿ ಸಂತಾಪ ಸಭೆ ಹಮ್ಮಿಕೊಳ್ಳಲಿದ್ದೇವೆ,’ ಎಂದು ಅಖಿಲೇಶ್‌ ತಿಳಿಸಿದ್ದಾರೆ.

23 ವರ್ಷದ ಉನ್ನಾವ್‌ ಮಹಿಳೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವು ಖಂಡನೀಯ ಘಟನೆಯಾಗಿದೆ ಎಂದಿರುವ ಅವರು, ‘ಅತ್ಯಾಚಾರ ಆಗಿರುವ ಮಹಿಳೆಗೆ ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ. ಇದು ನಮಗೆ ಕರಾಳ ದಿನವಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಇದು ಮೊದಲ ಘಟನೆ ಏನಲ್ಲ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ಅಪರಾಧಿಗಳಿಗೆ ಗುಂಡು ಹೊಡೆದು ಸಾಯಿಸಲಾಗುವುದು ಎಂದು ಹೇಳುತ್ತಾರೆ. ಆದರೆ, ಅವರಿಗೆ ಹೆಣ್ಣುಮಗಳ ಜೀವ ಉಳಿಸಲು ಸಾಧ್ಯವಾಗಲಿಲ್ಲ,’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.