ಚೆನ್ನೈ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚೆನ್ನೈ ಮಹಾನಗರದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಇಂತಹ ಸನ್ನಿವೇಶದಲ್ಲಿ ಮಹಿಳಾ ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ವ್ಯಕ್ತಿಯೋರ್ವನನ್ನು ಹೆಗಲ ಮೇಲೆ ಹೊತ್ತು ಆಸ್ಪತ್ರೆಗೆ ಸಾಗಿಸಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಮರವೊಂದು ಬಿದ್ದು ಯುವಕ ಮೃತಪಟ್ಟಿದ್ದಾನೆ ಎಂದು ಎಲ್ಲರೂ ಭಾವಿಸಿದ್ದರು. ಆ ಸಂದರ್ಭದಲ್ಲಿ ಸ್ಥಳಕ್ಕೆ ಆಗಮಿಸಿರುವ ಪೊಲೀಸ್ ಇನ್ಸ್‌ಪೆಕ್ಟರ್ ಟಿ.ರಾಜೇಶ್ವರಿ ಅವರು ವ್ಯಕ್ತಿಯು ಇನ್ನೂ ಉಸಿರಾಡುತ್ತಿರುವುದನ್ನು ಗಮನಿಸಿದ್ದಾರೆ. ವ್ಯಕ್ತಿಯನ್ನು ತಾವೇ ಹೆಗಲ ಮೇಲೆ ಹೊತ್ತುಕೊಂಡು ಆಟೋರಿಕ್ಷಾವೊಂದಕ್ಕೆ ಹಾಕಿದ್ದಾರೆ. ಹತ್ತಿರದ ಆಸ್ಪತ್ರೆಗೆ ಸಾಗಿಸುವ ಮೂಲಕ ಆತನ ಪ್ರಾಣ ಉಳಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಟಿ.ರಾಜೇಶ್ವರಿ ಅವರ ಈ ಕಾರ್ಯಕ್ಕೆ ಸಾಮಾಜಿಕ ತಾಣಗಳಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ಭರತ್ ಎಂಬುವವರು ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ವಿಡಿಯೊ ಇಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.