ನವದೆಹಲಿ: ಇದೇ 22 ರಂದು ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮ ಇರುವ ಹಿನ್ನೆಲೆ ದೇಶದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಕೇಂದ್ರ ಸರ್ಕಾರ ಅರ್ಧ ದಿನ ರಜೆ ಘೋಷಣೆ ಮಾಡಿದೆ.
ಸೋಮವಾರ (ಜ.22ರಂದು) ಪ್ರಧಾನಿ ನರೇಂದ್ರ ಮೋದಿಯವರು ಮುಖ್ಯ ಯಜಮಾನರಾಗಿ ಗರ್ಭಗುಡಿಯಲ್ಲಿ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಮಾಡಲಿದ್ದಾರೆ.
ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಲು ನೌಕರರಿಗೆ ಅನುವು ಮಾಡಿಕೊಡಲು, ದೇಶದಾದ್ಯಂತ ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳು, ಕೇಂದ್ರ ಸಂಸ್ಥೆಗಳು ಮತ್ತು ಕೇಂದ್ರ ಕೈಗಾರಿಕಾ ಸಂಸ್ಥೆಗಳಿಗೆ ಅರ್ಧ ದಿನ (ಮಧ್ಯಾಹ್ನ 2.30ರವರೆಗೆ) ರಜೆ ಘೋಷಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ರಜೆ ಘೋಷಣೆ ಕುರಿತು ಸಾರ್ವಜನಿಕರಿಂದ ದೊಡ್ಡ ಬೇಡಿಕೆಯಿತ್ತು. ಜನರ ಭಾವನೆಗಳಿಗೆ ಬೆಲೆಕೊಟ್ಟು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಿಬ್ಬಂದಿ ಖಾತೆ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಪಿಟಿಐಗೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.