ಪಣಜಿ: ‘ಗೋವಾದಲ್ಲಿ ಬಹುತೇಕ ರಾಜಕೀಯ ಪಕ್ಷಗಳು ಆಡಳಿತಾರೂಢ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿವೆ. ಇಂಥ ರಾಜಕೀಯ ನಡೆಗಳನ್ನು ತಡೆಯುವ ನಿಟ್ಟಿನಲ್ಲಿ ಇಷ್ಟು ವರ್ಷಗಳ ಕಾಲ ಕಾಂಗ್ರೆಸ್ ಏನೂ ಮಾಡಿಲ್ಲ’ ಎಂದು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಶನಿವಾರ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗೋವಾದಲ್ಲಿ ಬಿಜೆಪಿಯನ್ನು ಸೋಲಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಇಷ್ಟು ವರ್ಷ ಏನೂ ಮಾಡಿಲ್ಲ. ಕಾಂಗ್ರೆಸ್‌ನ ಹಿರಿಯ ಮುಖಂಡ ಪಿ.ಚಿದಂಬರಂ ಅವರು ದಿನದ ಮಟ್ಟಿಗೆ ಇಲ್ಲಿಗೆ ಬರುತ್ತಾರೆ, ಇಲ್ಲಿ ಓಡಾಡುತ್ತಾರೆ. ಇದರಿಂದ ಏನೂ ಸಾಧಿಸಲು ಆಗುವುದಿಲ್ಲ’ ಎಂದು ಟೀಕಿಸಿದರು.
ಹಣದುಬ್ಬರ ವಿರೋಧಿಸಿ ಗೋವಾದಲ್ಲಿ ಕಾಂಗ್ರೆಸ್ ಇತ್ತೀಚೆಗೆ ರ‍್ಯಾಲಿ ನಡೆಸಿದ್ದನ್ನು ಪ್ರಸ್ತಾಪಿಸಿ ಅವರು ಈ ರೀತಿ ವಾಗ್ದಾಳಿ ನಡೆಸಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರದ ಆಡಳಿತ ವೈಖರಿ ಟೀಕಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಪಶ್ಚಿಮ ಬಂಗಾಳದ ಜನರು ಬಿಜೆಪಿಯನ್ನು ತಿರಸ್ಕರಿಸಿದ್ದಾರೆ. ಹೀಗಾಗಿ ಅವರು ಗೋವಾದಲ್ಲಿ ಟಿಎಂಸಿಯನ್ನು ಟೀಕಿಸುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.