ಪ್ರಯಾಗ್‌ರಾಜ್: ಉತ್ತರಪ್ರದೇಶದ ಮಥುರಾದಲ್ಲಿರುವ ಶ್ರೀಕೃಷ್ಣ ದೇವಾಲಯದ ಪಕ್ಕದಲ್ಲಿರುವ ಶಾಹೀ ಈದ್ಗಾ ಮಸೀದಿ ಆವರಣದಲ್ಲಿ ನ್ಯಾಯಾಲಯ ಮೇಲ್ವಿಚಾರಣೆಯಲ್ಲಿ ಸರ್ವೆ ಕಾರ್ಯ ನಡೆಸಲು ಅಲಹಾಬಾದ್ ಹೈಕೋರ್ಟ್ ಗುರುವಾರ ಅನುಮತಿ ನೀಡಿದೆ.
17ನೇ ಶತಮಾನದಲ್ಲಿ ನಿರ್ಮಿಸಲಾದ ಮಸೀದಿ ಇರುವ ಜಾಗ ಒಂದು ಕಾಲದಲ್ಲಿ ಶ್ರೀಕೃಷ್ಣ ಜನ್ಮಭೂಮಿಯಾಗಿತ್ತು ಎಂಬ ಅರ್ಜಿದಾರರ ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯ, ಅಡ್ವೊಕೇಟ್ ಕಮಿಷನರ್ ಅವರ ಮೇಲ್ವಿಚಾರಣೆಯಲ್ಲಿ ಮಸೀದಿ ಜಾಗದಲ್ಲಿ ಸರ್ವೆ ನಡೆಸುವಂತೆ ಸೂಚಿಸಿತು.
ಸರ್ವೆ ವಿಧಾನ ಹೇಗಿರಬೇಕು ಎಂಬುದನ್ನು ಡಿ. 18ರಂದು ನಡೆಯುವ ಮುಂದಿನ ವಿಚಾರಣೆ ಸಂದರ್ಭದಲ್ಲಿ ತಿಳಿಸಲಾಗುವುದು ಎಂದು ಪೀಠ ಹೇಳಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.