ಲಖನೌ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಪೌರತ್ವಕ್ಕೆ ಸಂಬಂಧಿಸಿ ಗೃಹ ಸಚಿವಾಲಯಕ್ಕೆ ಸಲ್ಲಿಸಲಾಗಿರುವ ಅರ್ಜಿಗೆ ಸಂಬಂಧಿಸಿ ಕೈಗೊಂಡ ಕ್ರಮ ಕುರಿತು ಮಾಹಿತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಸೂಚಿಸಿದೆ.
ನ್ಯಾಯಮೂರ್ತಿಗಳಾದ ಎ.ಆರ್.ಮಸೂದಿ ಹಾಗೂ ಸುಭಾಷ್ ವಿದ್ಯಾರ್ಥಿ ಅವರು ಇದ್ದ ವಿಭಾಗೀಯ ನ್ಯಾಯಪೀಠವು ಈ ಕುರಿತು ಮಂಗಳವಾರ ಆದೇಶಿಸಿದೆ.
ರಾಹುಲ್ ಗಾಂಧಿ ಅವರು ಬ್ರಿಟನ್ ಪೌರತ್ವ ಹೊಂದಿದ್ದಾರೆ. ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಕೋರಿ ಕರ್ನಾಟಕದ ಎಸ್.ವಿಘ್ನೇಶ್ ಶಿಶಿರ್ ಎಂಬುವವರು ಈ ಅರ್ಜಿ ಸಲ್ಲಿಸಿದ್ದಾರೆ.
‘ಈ ಅರ್ಜಿಗೆ ಸಂಬಂಧಿಸಿದ ಮಾಹಿತಿಯನ್ನು ಮುಂದಿನ ವಿಚಾರಣೆ ದಿನ ಸಲ್ಲಿಸಬೇಕು’ ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ಬಿ.ಪಾಂಡೆ ಅವರಿಗೆ ಸೂಚಿಸಿದ ನ್ಯಾಯಪೀಠ, ಅರ್ಜಿಯನ್ನು ಡಿ.16ರ ನಂತರ ವಿಚಾರಣೆ ಪಟ್ಟಿಗೆ ಸೇರಿಸುವಂತೆ ಸಂಬಂಧಪಟ್ಟ ಅಧಿಕಾರಿಗೆ ಸೂಚಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.