ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ಪೊಲೀಸರ ವಶದಲ್ಲಿರುವ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಅವರ ಜಾಮೀನು ಅರ್ಜಿಯನ್ನು ಲಖಿಂಪುರ ಖೇರಿ ಸೆಷನ್ಸ್ ನ್ಯಾಯಾಲಯ ಶನಿವಾರ ತಿರಸ್ಕರಿಸಿದೆ.
ಜುಬೈರ್ ಅವರ ಪೊಲೀಸ್ ಕಸ್ಟಡಿ ವಿಚಾರಣೆಯು ಜುಲೈ 20 ರಂದು ನಡೆಯಲಿದೆ ಎಂದು ಅವರ ಪರ ವಕೀಲ ಹರ್ಜಿತ್ ಸಿಂಗ್ ಖಚಿತಪಡಿಸಿದ್ದಾರೆ.
ಜುಬೈರ್ ಅವರನ್ನು ಜೂನ್ 27ರಂದು ಬಂಧಿಸಲಾಗಿತ್ತು. ಅವರ ವಿರುದ್ಧ ಐಪಿಸಿ ಸೆಕ್ಷನ್ 153ಎ (ಧಾರ್ಮಿಕ, ಜನಾಂಗೀಯ, ಹುಟ್ಟಿದ ಸ್ಥಳ, ಭಾಷೆಯ ಹಿನ್ನೆಲೆಯಲ್ಲಿ ಭಿನ್ನ ಗುಂಪುಗಳ ನಡುವೆ ದ್ವೇಷವನ್ನು ಹರಡುವುದು) ಹಾಗೂ 295ಎ (ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲು ಉದ್ದೇಶಪೂರ್ವಕವಾಗಿ ನಡೆಸಿದ ಕೃತ್ಯ) ಅಡಿಯಲ್ಲಿ ಈ ತಿಂಗಳ ಆರಂಭದಲ್ಲಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.