ಪಣಜಿ: ಡೆಪ್ಯುಟಿ ಸ್ಪೀಕರ್ ಆಯ್ಕೆಗಾಗಿ ಇದೇ 12ರಂದು ನಡೆಯಬೇಕಿದ್ದ ಚುನಾವಣೆಗೆ ಸಂಬಂಧಿಸಿದ ಅಧಿಸೂಚನೆಯನ್ನು ಗೋವಾ ವಿಧಾನಸಭೆಯ ಸ್ಪೀಕರ್ ರಮೇಶ್ ತವಾಡ್ಕರ್ ರದ್ದುಪಡಿಸಿದ್ದಾರೆ.
40 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಕೆಲವು ಸದಸ್ಯರು ಬಿಜೆಪಿಗೆ ಪಕ್ಷಾಂತರ ಮಾಡಬಹುದು ಎಂಬ ವದಂತಿಯು ದಟ್ಟವಾಗಿರುವ ಹಿಂದೆಯೇ ಈ ಬೆಳವಣಿಗೆ ನಡೆದಿದೆ. ವಿಧಾನಸಭೆ ಕಾರ್ಯದರ್ಶಿ ನಮ್ರತಾ ಉಲ್ಮಾನ್ ಅವರು ಡೆಪ್ಯುಟಿ ಸ್ಪೀಕರ್ ಆಯ್ಕೆಗಾಗಿ ಜುಲೈ 8ರಂದು ಅಧಿಸೂಚನೆ ಹೊರಡಿಸಿದ್ದರು.
ಈ ಮಧ್ಯೆ ವಿಧಾನಸಭಾ ಅಧಿವೇಶನ ಸೋಮವಾರ ಆರಂಭವಾಗಲಿದ್ದು ಎರಡು ವಾರಗಳವರೆಗೆ ನಡೆಯಲಿದೆ. ಗೋವಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಮಿತ್ ಪಾಟ್ಕರ್ ಅವರು, ಪಕ್ಷದ ಕೆಲ ಶಾಸಕರ ಪಕ್ಷಾಂತರ ಸಾಧ್ಯತೆ ವದಂತಿಗಳನ್ನು ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದರು. ‘ಆಡಳಿತ ಪಕ್ಷದವರೇ ಇಂತಹ ವದಂತಿಯನ್ನು ಹಬ್ಬಿಸುತ್ತಿದ್ದಾರೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.