ADVERTISEMENT

Maharashtra Elections: ₹2.3 ಕೋಟಿ ನಗದು ವಶ, 12 ಮಂದಿಯ ಬಂಧನ

ಪಿಟಿಐ
Published 8 ನವೆಂಬರ್ 2024, 4:26 IST
Last Updated 8 ನವೆಂಬರ್ 2024, 4:26 IST
<div class="paragraphs"><p>ನಗದು ವಶ</p></div>

ನಗದು ವಶ

   

(ಪಿಟಿಐ ಸಂಗ್ರಹ ಚಿತ್ರ)

ಮುಂಬೈ: ಮಹಾರಾಷ್ಟ್ರ ಚುನಾವಣಾ ಹೊಸ್ತಿಲಲ್ಲಿರುವಂತೆಯೇ ದಕ್ಷಿಣ ಮುಂಬೈಯ ಕಲ್ಬಾದೇವಿ ಪ್ರದೇಶದಲ್ಲಿ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಬರೋಬ್ಬರಿ ₹2.3 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಚುನಾವಣಾಧಿಕಾರಿಗಳು ಹಾಗೂ ಲೋಕಮಾನ್ಯ ತಿಲಕ್ ಮಾರ್ಗ್ ಪೊಲೀಸ್ ಠಾಣೆಯ ಪೊಲೀಸರು ಗುರುವಾರ ರಾತ್ರಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ.

ಶೋಧ ವೇಳೆಯಲ್ಲಿ ₹2.3 ಕೋಟಿ ನಗದು ವಶಪಡಿಸಿಕೊಳ್ಳಲಾಗಿದೆ. ಬಂಧಿತ ವ್ಯಕ್ತಿಗಳು ಈ ನಗದಿಗೆ ಸಂಬಂಧಿಸಿದಂತೆ ಯಾವುದೇ ದಾಖಲೆ ಹಾಜರುಪಡಿಸಿಲ್ಲ. ಇಷ್ಟು ದೊಡ್ಡ ಮೊತ್ತವನ್ನು ಎಲ್ಲಿಗೆ ಸಾಗಿಸುತ್ತಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ವಿವರಣೆ ನೀಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರ ಬೆಳಗಿನ ಜಾವದವರೆಗೆ ನಡೆದ ವಿಚಾರಣೆಯ ಬಳಿಕ ನಗದು ಸಾಗಿಸುತ್ತಿದ್ದ 12 ಮಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಂತರ ಜಪ್ತಿ ಮಾಡಲಾದ ನಗದನ್ನು ಹೆಚ್ಚಿನ ತನಿಖೆಗಾಗಿ ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಗಿದೆ.

ಮಹಾರಾಷ್ಟ್ರದಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಚುನಾವಣಾ ಆಯೋಗದ ಸೂಚನೆ ಮೇರೆಗೆ ನಗದು, ಮದ್ಯ ಹಾಗೂ ಇತರೆ ವಸ್ತುಗಳ ಚಲನವಲನಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.