ADVERTISEMENT

ಜಾರ್ಖಂಡ್ ಬಿಕ್ಕಟ್ಟು | ಸಿಎಂ ಹೇಮಂತ್ ಸೊರೇನ್ ವಿಶ್ವಾಸಮತ ಯಾಚನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಸೆಪ್ಟೆಂಬರ್ 2022, 8:17 IST
Last Updated 5 ಸೆಪ್ಟೆಂಬರ್ 2022, 8:17 IST
ಹೇಮಂತ್ ಸೊರೇನ್
ಹೇಮಂತ್ ಸೊರೇನ್   

ರಾಂಚಿ: ಜಾರ್ಖಂಡ್‌ನಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಇಂದು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿಶ್ವಾಸಮತ ಯಾಚಿಸಿದ್ದಾರೆ.

ರೆಸಾರ್ಟ್‌ನಲ್ಲಿ ತಂಗಿದ್ದ ಜಾರ್ಖಂಡ್‌ನ ಆಡಳಿತಾರೂಢ ಯುಪಿಎ ಮೈತ್ರಿಕೂಟದ 30 ಶಾಸಕರು ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳಲು ಭಾನುವಾರ ಮಧ್ಯಾಹ್ನವೇ ರಾಂಚಿಗೆ ಮರಳಿದ್ದರು.

ಇದನ್ನೂ ಓದಿ:

ವಿರೋಧ ಪಕ್ಷ ಬಿಜೆಪಿಯ ಶಾಸಕರು ಅಧಿವೇಶನದಲ್ಲಿ ತೀವ್ರ ಗದ್ದಲ ಎಬ್ಬಿಸಿದ್ದಾರೆ. ಈ ಅವಧಿಯಲ್ಲಿ ಯಾವುದೇ ಮಸೂದೆ ಮಂಡಿಸುವ ಸರ್ಕಾರದ ಪ್ರಯತ್ನವನ್ನು ವಿರೋಧಿಸಲಾಗುವುದು ಎಂದು ಬಿಜೆಪಿಯ ಮುಖಂಡರು ಹೇಳಿದ್ದಾರೆ.

ಯುಪಿಎ ಮೈತ್ರಿಕೂಟದ ಶಾಸಕರನ್ನು ಬಿಜೆಪಿ ಸೆಳೆಯುವ ಭೀತಿ ಇದ್ದ ಹಿನ್ನೆಲೆಯಲ್ಲಿ ಕಳೆದ ಆಗಸ್ಟ್ 30ರಂದು ಛತ್ತೀಸ್‌ಗಡದ ರಾಯಪುರ ಸಮೀಪದ ರೆಸಾರ್ಟ್‌ಗೆ ಸ್ಥಳಾಂತರಿಸಲಾಗಿತ್ತು.

ADVERTISEMENT

ಗಣಿಗಾರಿಕೆ ಗುತ್ತಿಗೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಆಗಸ್ಟ್ 25ರಂದು ಚುನಾವಣಾ ಆಯೋಗವು ರಾಜ್ಯಪಾಲರಿಗೆ ಶಿಫಾರಸು ಮಾಡಿದೆ ಎಂದು ವರದಿಯಾಗಿತ್ತು.

ಇದು ಇನ್ನೂ ಅಧಿಕೃತವಾಗದಿದ್ದರೂ ಜಾರ್ಖಂಡ್ ರಾಜಕಾರಣದಲ್ಲಿ ಅನಿಶ್ಚಿತತೆಗೆ ಕಾರಣವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.