ನವದೆಹಲಿ: ಎಚ್1ಎನ್1ದಿಂದ ಬಳಲುತ್ತಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಶೀಘ್ರವೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಉಸಿರಾಟ ತೊಂದರೆ ಮತ್ತು ಎದೆ ನೋವು ಕಾಣಿಸಿಕೊಂಡಿದ್ದರಿಂದ ಶಾಬುಧವಾರ ರಾತ್ರಿ ಏಮ್ಸ್‌ಗೆ ತಪಾಸಣೆಗೆ ತೆರಳಿದ್ದರು. ಅಲ್ಲಿ ಅವರಿಗೆ ಎಚ್1ಎನ್1 ಇರುವುದು ಪತ್ತೆಯಾಗಿತ್ತು.
ಸದ್ಯ ಅವರನ್ನು ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಿ ಏಮ್ಸ್ ನಿರ್ದೇಶಕ ಡಾ. ರಣದೀಪ್ ಗುಲೇರಿಯಾ ಚಿಕಿತ್ಸೆ ನೀಡುತ್ತಿದ್ದಾರೆ.
ಅಮಿತ್ ಶಾ ಸದ್ಯ ಆರೋಗ್ಯವಾಗಿದ್ದು, ಅವರಿಗೆ ವೈದ್ಯರು ಪೂರಕ ಚಿಕಿತ್ಸೆ ನೀಡುತ್ತಿದ್ದಾರೆ. ಅವರುಶೀಘ್ರದಲ್ಲೇ ಏಮ್ಸ್‌ನಿಂದಬಿಡುಗಡೆಯಾಗಲಿದ್ದಾರೆ ಎಂದುಬಿಜೆಪಿ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.