ದಿಯು: ಕಳೆದ ಎಂಟು ವರ್ಷಗಳಲ್ಲಿ ನರೇಂದ್ರ ಮೋದಿ ಸರ್ಕಾರ, ಜಗತ್ತಿನಲ್ಲಿ ಭಾರತದ ಹಿರಿಮೆಯನ್ನು ಮರುಸ್ಥಾಪಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ದಿಯುವಿನಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಬಳಿಕ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಕೋವಿಡ್ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲಾಯಿತು. ಕೋವಿಡ್ ಲಸಿಕೆಯ ಪ್ರಮಾಣಪತ್ರವನ್ನು ಕೂಡ ತ್ವರಿತವಾಗಿ ನೀಡಲಾಗಿತ್ತು. ಆದರೆ ಮುಂದುವರಿದ ರಾಷ್ಟ್ರಗಳಲ್ಲಿ ಅಂತಹ ವ್ಯವಸ್ಥೆಯಿರಲಿಲ್ಲ ಎಂದು ಶಾ ಹೇಳಿದ್ದಾರೆ.
ಕೋವಿಡ್ ಲಸಿಕೆ ನೀಡುವಿಕೆ ಮತ್ತು ನಿರ್ವಹಣೆಯ ಕುರಿತು ಹಲವು ರಾಷ್ಟ್ರಗಳು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮಾತುಕತೆ ನಡೆಸಿದ್ದಾರೆ. ಇಲ್ಲಿನ ವ್ಯವಸ್ಥೆ ಅವರಿಗೆ ಅಚ್ಚರಿ ತಂದಿದೆ ಎಂದು ಶಾ ತಿಳಿಸಿದ್ದಾರೆ.
ಕಾಂಗ್ರೆಸ್ 58 ವರ್ಷ ಆಳ್ವಿಕೆ ನಡೆಸಿದರೂ, ಬಡತನ ನಿರ್ಮೂಲನೆಯ ಹೆಸರಿನಲ್ಲಿ ಏನೂ ಮಾಡಿಲ್ಲ. ಆದರೆ, ಬಿಜೆಪಿ ಸರ್ಕಾರ ಕಳೆದ ಎಂಟು ವರ್ಷಗಳಲ್ಲಿ ಬಡತನ ಹೋಗಲಾಡಿಸಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.