ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಉಗ್ರಗಾಮಿ ಆಡಳಿತವಿದ್ದು,ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದ್ದಾರೆ ಎಂದುಬಿಜೆಪಿ ಅಧ್ಯಕ್ಷ ಅಮಿತ್ ಶಾ, ಮಮತಾವಿರುದ್ಧ ಶುಕ್ರವಾರ ಹರಿಹಾಯ್ದಿದ್ದಾರೆ.
ಮುಂಬರುವ ಲೋಕಸಭೆಚುನಾವಣೆಯನ್ನು ಗಮನದಲ್ಲಿಟ್ಟು ರಾಜ್ಯದೆಲ್ಲಡೆ ರಥ ಯಾತ್ರೆ ನಡೆಸಲು ಬಿಜೆಪಿ ಉದ್ದೇಶಿಸಿದೆ. ಆದರೆಪಶ್ಚಿಮ ಬಂಗಾಳ ಸರ್ಕಾರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿದೆ. ಬಂಗಾಳದಲ್ಲಿ ಬಿಜೆಪಿ ಬೆಳೆಯುತ್ತಿರುವುದನ್ನು ಕಂಡುಮಮತಾ ಬ್ಯಾನರ್ಜಿ ಭಯಗೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.
ನಾವು ಪಶ್ಚಿಮ ಬಂಗಾಳದಲ್ಲಿ ರಥ ಯಾತ್ರೆಯನ್ನುನಡೆಸುತ್ತೇವೆ, ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅಮಿತ್ ಶಾ ಗುಡುಗಿದ್ದಾರೆ.
ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವ ಸಾಧ್ಯತೆ ಇರುವುದರಿಂದ ಅನುಮತಿ ನಿರಾಕರಿಸಲಾಗಿದೆ ಎಂದು ಅಡ್ವೊಕೇಟ್ ಜನರಲ್ ಕಿಶೋರ್ ದತ್ತಾ ಕಲ್ಕತ್ತಾ ಹೈಕೋರ್ಟ್‌ಗೆ ಗುರುವಾರ ತಿಳಿಸಿದ್ದರು. ಇದಕ್ಕೆಕಲ್ಕತ್ತಾ ಹೈಕೋರ್ಟ್ ಸಮ್ಮತಿಸಿ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.
ಕಲ್ಕತ್ತಾ ಹೈಕೋರ್ಟ್‌ನ ಏಕಸದಸ್ಯ ಪೀಠ ನೀಡಿರುವ ಆದೇಶವನ್ನು ಪುನರ್ ಪರಿಶೀಲಿಸುವಂತೆ ಇಲ್ಲಿನ ವಿಭಾಗಿಯಪೀಠಕ್ಕೆ ಶುಕ್ರವಾರ ಬಿಜೆಪಿ ಮನವಿ ಮಾಡಿದೆ. ಈ ಮನವಿಯನ್ನು ವಿಭಾಗಿಯ ನ್ಯಾಯಪೀಠ ಪುರಸ್ಕರಿಸಿದೆ.
ಬಂಗಾಳದ 42 ಲೋಕಸಭಾ ಕ್ಷೇತ್ರಗಳಲ್ಲೂ ರಥಯಾತ್ರೆ ನಡೆಸುವ ಉದ್ದೇಶವನ್ನು ಬಿಜೆಪಿ ಹೊಂದಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 22 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದೆ. ಬಂಗಾಳದಲ್ಲಿ ಪ್ರಸ್ತುತ 2 ಲೋಕಸಭಾ ಸ್ಥಾನಗಳನ್ನು ಮಾತ್ರ ಬಿಜೆಪಿ ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.