ADVERTISEMENT

ತಮಿಳ್‌ಇಸೈಗೆ ಅಮಿತ್ ಶಾ ‘ಎಚ್ಚರಿಕೆ’

ಪಿಟಿಐ
Published 12 ಜೂನ್ 2024, 15:42 IST
Last Updated 12 ಜೂನ್ 2024, 15:42 IST
<div class="paragraphs"><p>ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್.ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ತಮಿಳ್‌ಇಸೈ ಸೌಂದರರಾಜನ್ ಅವರಿಗೆ ‘ಎಚ್ಚರಿಕೆ’ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ</p></div>

ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಎನ್.ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಿದ ಸಮಾರಂಭದಲ್ಲಿ ತಮಿಳ್‌ಇಸೈ ಸೌಂದರರಾಜನ್ ಅವರಿಗೆ ‘ಎಚ್ಚರಿಕೆ’ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

   

–ಪಿಟಿಐ ಚಿತ್ರ

ಚೆನ್ನೈ: ವಿಜಯವಾಡದಲ್ಲಿ ಬುಧವಾರ ನಡೆದ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ತಮಿಳುನಾಡಿನ ಬಿಜೆಪಿಯ ಆಂತರಿಕ ಭಿನ್ನಾಭಿಪ್ರಾಯದ ವಿಷಯ ಪ್ರಸ್ತಾಪವಾಗಿದೆ. 

ADVERTISEMENT

ಲೋಕಸಭಾ ಚುನಾವಣೆಯಲ್ಲಿ ಪಕ್ಷವು ತಮಿಳುನಾಡಿನಲ್ಲಿ ಯಾವುದೇ ಕ್ಷೇತ್ರಗಳಲ್ಲಿ ಗೆಲುವು ಸಾಧಿಸದ ಬಗ್ಗೆ ಬಹಿರಂಗ ಹೇಳಿಕೆಗಳನ್ನು ನೀಡುತ್ತಿರುವ ಬಿಜೆಪಿ ನಾಯಕಿ ತಮಿಳ್‌ಇಸೈ ಸೌಂದರರಾಜನ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ‘ಎಚ್ಚರಿಕೆ’ ನೀಡಿದ್ದಾರೆ.

ವೇದಿಕೆ ಮೇಲೆ ತಮಿಳ್‌ಇಸೈ ಅವರಿಗೆ ಅಮಿತ್ ಶಾ ‘ಎಚ್ಚರಿಕೆ’ ನೀಡುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಜಾಲತಾಣಗಳ ವೇದಿಕೆಗಳಲ್ಲಿ ತಮಿಳ್‌ಇಸೈ ಮತ್ತು ಅಣ್ಣಾಮಲೈ ಬೆಂಬಲಿಗರ ನಡುವೆ ಸಂಘರ್ಷ ನಡೆಯುತ್ತಿರುವುದರ ಹಿನ್ನೆಲೆಯಲ್ಲಿ ಈ ವಿಡಿಯೊ ಅನ್ನು ವಿಶ್ಲೇಷಿಸಲಾಗುತ್ತಿದೆ.

ತೆಲಂಗಾಣದ ಮಾಜಿ ರಾಜ್ಯಪಾಲರಾದ ತಮಿಳ್‌ಇಸೈ ಅವರು ತಮಿಳುನಾಡು ಬಿಜೆಪಿ ಘಟಕದ ವಿರುದ್ಧ ಟೀಕೆ ಮಾಡಿದ್ದರು. ಅಪರಾಧ ಹಿನ್ನೆಲೆಯ ಜನ ಪಕ್ಷದಲ್ಲಿ ಸೇರಿದ್ದಾರೆ ಎಂದು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದರು. ಅದರ ಬಗ್ಗೆ ಬೇಸರಗೊಂಡಿದ್ದ ಅಮಿತ್ ಶಾ ಅವರು, ‘ಪಕ್ಷದ ವಿಚಾರಗಳ ಬಗ್ಗೆ ಸಾರ್ವಜನಿಕ ವೇದಿಕೆಗಳಲ್ಲಿ ಮಾತನಾಡಬಾರದು. ಇದನ್ನು ಎಲ್ಲರೂ ಗಮನದಲ್ಲಿಟ್ಟುಕೊಳ್ಳಬೇಕು’ ಎಂಬುದಾಗಿ ಎಚ್ಚರಿಕೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.