ADVERTISEMENT

ಅಮಿತಾಬ್ ಬಚ್ಚನ್‌ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2019, 15:42 IST
Last Updated 24 ಸೆಪ್ಟೆಂಬರ್ 2019, 15:42 IST
ಅಮಿತಾಬ್ ಬಚ್ಚನ್
ಅಮಿತಾಬ್ ಬಚ್ಚನ್   

ನವದೆಹಲಿ: ಭಾರತೀಯ ಚಿತ್ರರಂಗಕ್ಕೆ ಸಲ್ಲಿಸಿದ ಜೀವಮಾನ ಸಾಧನೆಗಾಗಿ ಕೇಂದ್ರ ಸರ್ಕಾರ ನೀಡುವ ದಾದಾ ಸಾಹೇಬ್​ ಫಾಲ್ಕೆ ಪ್ರಶಸ್ತಿಗೆ ಈ ಬಾರಿ ಮೇರು ನಟ ಅಮಿತಾಬ್​ ಬಚ್ಚನ್​ ಆಯ್ಕೆಯಾಗಿದ್ದಾರೆ.

ಎರಡು ತಲೆಮಾರುಗಳನ್ನು ರಂಜಿಸಿದ ಮತ್ತು ಸ್ಫೂರ್ತಿ ತುಂಬಿದ ಅಮಿತಾಬ್ ಬಚ್ಚನ್ ಅವರನ್ನು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ. ಇಡೀ ದೇಶ ಮತ್ತು ವಿದೇಶದ ಜನರಿಗಿದು ಖುಷಿ ತಂದಿದೆ. ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಮಾಹಿತಿ ಮತ್ತು ಪ್ರಸಾರಾಂಗ ಸಚಿವ ಪ್ರಕಾಶ್ ಜಾವಡೇಕರ್ ಟ್ವೀಟಿಸಿದ್ದಾರೆ.

ಚಿತ್ರರಂಗದ ಅತ್ಯುನ್ನತ ಪ್ರಶಸ್ತಿ

ADVERTISEMENT

ಸಿನಿಮಾ ಕ್ಷೇತ್ರದಲ್ಲಿ ಜೀವಮಾನ ಸಾಧನೆಗಾಗಿಭಾರತೀಯ ಸಿನಿಮಾ ರಂಗದ ಪಿತಾಮಹಾ ದಾದಾಸಾಹೇಬ್ ಫಾಲ್ಕೆ ಹೆಸರಲ್ಲಿ ಭಾರತ ಸರ್ಕಾರ 1969ರಿಂದ ಪ್ರಶಸ್ತಿ ನೀಡುತ್ತಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಚಲನಚಿತ್ರೋತ್ಸವಗಳ ನಿರ್ದೇಶನಾಲಯದಿಂದ ಆಯೋಜಿಸಲಾಗುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಸಮಾರಂಭದಲ್ಲಿದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನೂ ಪ್ರದಾನ ಮಾಡಲಾಗುತ್ತದೆ.

ಪ್ರಶಸ್ತಿಯು ಸ್ವರ್ಣ ಕಮಲ ಪದಕ, ಶಾಲು ಹಾಗೂ ₹10 ಲಕ್ಷ ನಗದು ಬಹುಮಾನವನ್ನು ಒಳಗೊಂಡಿರುತ್ತದೆ. ನಟಿ ದೇವಿಕಾ ರಾಣಿ ಅವರಿಗೆ 17ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭದಲ್ಲಿ ಮೊದಲ ದಾದಾಸಾಹೇಬ್‌ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. 1995ರಲ್ಲಿ ವರನಟ ಡಾ.ರಾಜಕುಮಾರ್‌ ಅವರಿಗೆ ಫಾಲ್ಕೆ ಪ್ರಶಸ್ತಿ ಪ್ರದಾನಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.