ಚಂಡೀಗಢ: ಸಿಖ್ ಬೋಧಕ ಅಮೃತ್‌ಪಾಲ್ ಸಿಂಗ್ ಸಹೋದರ ಹರ್‌ಪ್ರೀತ್ ಸಿಂಗ್ ಮತ್ತು ಇಬ್ಬರನ್ನು ಮಾದಕವಸ್ತು ಪ್ರಕರಣದಲ್ಲಿ ಜಲಂಧರ್ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದರು.
ಹರ್‌ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮತ್ತು ಆತನ ಸಹಚರ ಲವ್‌ಪ್ರೀತ್ ಸಿಂಗ್ ಅಲಿಯಾಸ್ ಲವ್ ಗುರುವಾರ ಸಂಜೆ ಡ್ರಗ್ಸ್ ಸೇವನೆಗೆ ಸಿದ್ಧತೆ ನಡೆಸುತ್ತಿದ್ದ ವೇಳೆ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಂಕುರ್ ಗುಪ್ತಾ ತಿಳಿಸಿದರು.
‘ಇವರಿಬ್ಬರಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಸಂದೀಪ್ ಅರೋರಾ ಎಂಬಾತನನ್ನು ಬಂಧಿಸಲಾಗಿದೆ’ ಎಂದು ಹೇಳಿದರು.
ಹರ್‌ಪ್ರೀತ್ ಮತ್ತು ಲವ್‌ಪ್ರೀತ್ ಇದ್ದ ಕಾರಿನಲ್ಲಿ ನಾಲ್ಕು ಗ್ರಾಂ ಐಸಿಇ ಡ್ರಗ್ಸ್ ಪತ್ತೆಯಾಗಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.