ಅಮೃತಸರ: ವ್ಯಕ್ತಿಯೊಬ್ಬ ತನ್ನ ಆರು ತಿಂಗಳ ಗರ್ಭಿಣಿ ಹೆಂಡತಿಗೆ ಬೆಂಕಿ ಹಚ್ಚಿ ಕೊಲೆ ಮಾಡಿದ ಘಟನೆ ಪಂಜಾಬ್‌ನ ಅಮೃತಸರದ ನನ್ಗಾಲ್ ಗ್ರಾಮದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.
ಸುಖದೇವ್ ಸಿಂಗ್ ಎನ್ನುವಾತ ಪತ್ನಿ ಪಿಂಕಿ (23) ಮಲಗಿರುವಾಗ ಹಾಸಿಗೆಗೆ ಬೆಂಕಿ ಹಚ್ಚಿದ್ದಾನೆ. ಘಟನೆಯ ಬಗ್ಗೆ ಊರಿನ ಸರಪಂಚ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ ನೀಡುವ ಹೊತ್ತಿಗೆ ಪಿಂಕಿ ಅವರ ದೇಹ ಸಂಪೂರ್ಣವಾಗಿ ಸುಟ್ಟು ಮೃತಪಟ್ಟಿದ್ದರು ಎಂದು ವರದಿಯಾಗಿದೆ.
ಸುಖದೇವ್ ಅವರನ್ನು ಪೊಲೀಸರು ಬಂಧಿಸಿದ್ದು, ಕೊಲೆ ಪ್ರಕರಣದ ದಾಖಲಿಸಿದ್ದಾರೆ.
ಸುಖದೇವ್ ಮತ್ತು ಪಿಂಕಿ ಎರಡೂವರೆ ವರ್ಷದ ಹಿಂದೆ ವಿವಾಹವಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.