ಲಡಾಕ್: ಲಡಾಕ್‌ನ ಲೇಹ್‌ನಲ್ಲಿ ರಿಕ್ಟರ್ ಮಾಪಕದಲ್ಲಿ 3.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತನ್ನ ಅಧಿಕೃತ ಖಾತೆಯಲ್ಲಿ ಮಾಹಿತಿ ನೀಡಿದೆ.
ಇಂದು ಮುಂಜಾನೆ 5.39ರ ಸುಮಾರಿಗೆ ಕಂಪನ ಉಂಟಾಗಿದೆ. ಭೂಕಂಪನದ ಕೇಂದ್ರ ಬಿಂದು ಐದು ಕಿ.ಮೀ. ಆಳದಲ್ಲಿ ಇತ್ತು ಎಂದು ಅದು ಹೇಳಿದೆ.
ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು (ಎನ್‌ಸಿಎಸ್) ದೇಶದಲ್ಲಿ ಸಂಭವಿಸುವ ಭೂಕಂಪದ ಚಟುವಟಿಕೆಗಳನ್ನು ಪತ್ತೆ ಮಾಡು ಇರುವ ಭಾರತ ಸರ್ಕಾರದ ಸಂಸ್ಥೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.