ನವದೆಹಲಿ: ಲೋಕಸಭಾ ಚುನಾವಣೆಗೆ ಮುಂಚಿನ ‘ಸೆಮಿಫೈನಲ್’ ಎಂದೇ ಪರಿಗಣಿಸಲಾಗಿರುವ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಹಾಗೂ ಛತ್ತೀಸಗಢ ವಿಧಾನಸಭೆ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಯಾವ ಪಕ್ಷ ಅಧಿಕಾರದ ಗದ್ದುಗೆ ಏರಲಿದೆ ಎಂಬುದು ಕುತೂಹಲ ಮೂಡಿಸಿದೆ.
ಚುನಾವಣಾ ಫಲಿತಾಂಶ ಕುರಿತು ‘ಎಕ್ಸ್’ನಲ್ಲಿ ಪ್ರತಿಕ್ರಿಯಿಸಿರುವ ಉದ್ಯಮಿ ಆನಂದ್ ಮಹೀಂದ್ರ, ‘ಯಾವುದೇ ಬ್ಲಾಕ್‌ಬಸ್ಟರ್ ಸಿನಿಮಾ, ಕ್ರೀಡೆಗಿಂತಲೂ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣಾ ಫಲಿತಾಂಶವು ಹೆಚ್ಚು ರೋಮಾಂಚನಕಾರಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.
ಇಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸಗಢದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಸ್ಪಷ್ಟಬಹುಮತದತ್ತ ದಾಪುಗಾಲಿಟ್ಟಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಬಹುತೇಕ ಖಚಿತವಾಗಿದೆ. ಈ ರಾಜ್ಯಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.